ಬಿಜೆಪಿ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ: ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ

Update: 2022-05-22 13:17 GMT

ಶಿವಮೊಗ್ಗ: ರಾಜ್ಯದಲ್ಲಿ ಒಂದು ವೇಳೆ ಕಾಂಗ್ರೆಸ್‌ ಸರಕಾರ ಅಧಿಕಾರದಲ್ಲಿ ಇದ್ದಿದ್ದರೆ ಪಿಎಸ್‌ಐ ನೇಮಕಾತಿ ಅಕ್ರಮ ವಿಚಾರ ಹೊರಗಡೆಯೇ ಬರುತ್ತಿರಲಿಲ್ಲ.  ಅದನ್ನು ಮುಚ್ಚಿ ಹಾಕುತ್ತಿದ್ದರು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆರೋಪಿಸಿದರು.

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಬಿಜೆಪಿ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ. ಹೀಗಾಗಿಯೇ ಪ್ರಕರಣದ ಬಗ್ಗೆ ಪಾರದರ್ಶಕವಾಗಿ ತನಿಖೆ ಮಾಡಲಾಗುತ್ತಿದೆ. ರಾಜ್ಯದಲ್ಲಿಯಾವ ಇಲಾಖೆಯ ಅಭಿವೃದ್ಧಿ ಕಾರ್ಯಗಳು ಸಹ ನಿಂತಿಲ್ಲ. ಜನರು ಸರಕಾರದ ಕಾರ್ಯದ ಬಗ್ಗೆ ಸಂತೋಷದಿಂದ ಮಾತನಾಡುತ್ತಿದ್ದಾರೆ'' ಎಂದು ಹೇಳಿದರು.

ಪ್ರತಿಪಕ್ಷಗಳಿಂದ ಗೊಂದಲ ಸೃಷ್ಟಿ: ಪಠ್ಯಪುಸ್ತಕದಲ್ಲಿ ಭಗತ್‌ ಸಿಂಗ್‌, ನಾರಾಯಣ್‌ ಗುರು ಹೆಸರು ತೆಗೆದು ಹಾಕಲಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ. ಇದು ಸುಳ್ಳು ಸೃಷ್ಟಿ. ಯಾವ ಕಾರಣಕ್ಕೂ ನಾರಾಯಣ ಗುರು, ಭಗತ್‌ ಸಿಂಗ್‌ ಹೆಸರು ಪಠ್ಯದಿಂದ ತೆಗೆಯುವುದಿಲ್ಲ. ಡಾ. ಹೆಡ್ಗೇವಾರ್‌ ಅವರ ರಾಷ್ಟ್ರಭಕ್ತಿ ವಿಚಾರವನ್ನು ಕೂಡ ಪಠ್ಯದಲ್ಲಿಹಾಕಲಾಗುತ್ತಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News