ಎಸಿಬಿಯಿಂದ ಅಹವಾಲು ಸ್ವೀಕಾರ

Update: 2022-05-22 15:53 GMT

ಉಡುಪಿ : ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಅಧಿಕಾರಿಗಳು ಮೇ ೨೪ರಂದು ಬೆಳಗ್ಗೆ ೧೧ರಿಂದ ಅಪರಾಹ್ನ ೧:೦೦ರವರೆಗೆ ಬೈಂದೂರು ಪ್ರವಾಸಿ ಮಂದಿರದಲ್ಲಿ ಹಾಗೂ ೨:೩೦ರಿಂದ ಸಂಜೆ ೪:೩೦ರವರೆಗೆ ಕುಂದಾಪುರ ಪ್ರವಾಸಿ ಮಂದಿರದಲ್ಲಿ ಮತ್ತು ಮೇ ೨೫ರಂದು ಬೆಳಗ್ಗೆ ೧೧ರಿಂದ ಅಪರಾಹ್ನ ೧:೦೦ರವರೆಗೆ ಕಾರ್ಕಳ ಪ್ರವಾಸಿ ಮಂದಿರದಲ್ಲಿ ಹಾಗೂ ಅಪರಾಹ್ನ  ೨:೩೦ರಿಂದ ಸಂಜೆ ೪:೩೦ರವರೆಗೆ ಹೆಬ್ರಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕ ರಿಂದ ಅಹವಾಲು ಸ್ವೀಕರಿಸಲಿದ್ದಾರೆ.

ಸಾರ್ವಜನಿಕ ನೌಕರರು ತನ್ನ ದಿನನಿತ್ಯದ ಕೆಲಸಗಳನ್ನು ನಿರ್ವಹಿಸಲು ಅನಗತ್ಯ ವಿಳಂಬ ಮಾಡಿದಲ್ಲಿ, ನಿರ್ಲಕ್ಷ್ಯತೆ ತೋರಿದಲ್ಲಿ ಅಥವಾ ಲಂಚ ಕೇಳಿದಲ್ಲಿ ದೂರು ಸ್ವೀಕರಿಸಲಾಗುವುದು ಎಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News