ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆಗೆ ಅವಕಾಶ

Update: 2022-05-22 15:55 GMT

ಉಡುಪಿ : ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ವಿಚಾರಣೆ ಬಯಸುವ ಜಿಲ್ಲೆಯ ಸಾರ್ವಜನಿಕರು ನಿಗದಿತ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದಾಗಿದೆ.

ಸಾರ್ವಜನಿಕರಿಗೆ ಅನುಕೂಲವಾಗುವ ಹಾಗೂ ಗಂಭೀರವಲ್ಲದ ಸಮಸ್ಯೆ ಗಳನ್ನು ಸ್ಥಳದಲ್ಲೇ ಪರಿಹರಿಸುವ ದೃಷ್ಟಿಯಿಂದ ದೂರು ಅರ್ಜಿಗಳ ಪ್ರಪತ್ರಗಳನ್ನು ಮೇ ೨೪ರಂದು ಬೈಂದೂರು ಪ್ರವಾಸಿ ಮಂದಿರ, ಮೇ ೨೫ರಂದು ಕುಂದಾಪುರ ಪ್ರವಾಸಿ ಮಂದಿರ, ಮೇ ೨೬ರಂದು ಹೆಬ್ರಿ ಪ್ರವಾಸಿ ಮಂದಿರ, ಮೇ ೨೭ರಂದು ಕಾರ್ಕಳ ಪ್ರವಾಸಿ ಮಂದಿರ, ಮೇ ೩೦ರಂದು ಬ್ರಹ್ಮಾವರ ತಾಲೂಕು ಕಚೇರಿ ಆವರಣ ಹಾಗೂ ಮೇ ೩೧ರಂದು ಕಾಪು ತಾಲೂಕು ಕಚೇರಿ ಆವರಣದಲ್ಲಿ ಬೆಳಗ್ಗೆ ೧೧ರಿಂದ ಅಪರಾಹ್ನ ೧:೩೦ರವರೆಗೆ ಸ್ವೀಕರಿಸಲಾಗುವುದು.

ಉಡುಪಿ ತಾಲೂಕಿಗೆ ಸಂಬಂಧಪಟ್ಟ ದೂರು ಅರ್ಜಿಗಳನ್ನು ನೇರವಾಗಿ ಉಡುಪಿ ಲೋಕಾಯುಕ್ತ ಕಛೇರಿಗೆ ನೀಡಬಹುದಾಗಿದೆ. ಕಾರ್ಯಕ್ರಮದಲ್ಲಿ ಉಡುಪಿ ಘಟಕದ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಭಾಗವಸಲಿದ್ದು, ಸಾರ್ವಜನಿಕರು ಸರ್ಕಾರಿ ಕೆಲಸ ಕಾರ್ಯಗಳಲ್ಲಿ ತೊಂದರೆ ಅನುಭವಿಸಿ ದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: ೦೮೨೦-೨೯೫೮೮೮೧ ಹಾಗೂ ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ:೦೮೨೦-೨೫೩೬೬೬೧ನ್ನು ಸಂಪರ್ಕಿಸ ಬಹುದು ಎಂದು ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News