ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ

Update: 2022-05-22 15:57 GMT

ಉಡುಪಿ :  ಕರ್ನಾಟಕ ಸಾಹಿತ್ಯ ಅಕಾಡೆಮಿಯ ವತಿಯಿಂದ ೨೦೨೧ನೇ ಸಾಲಿನ ಪುಸ್ತಕ ಬಹುಮಾನ ಕ್ಕಾಗಿ ೨೦೨೧ರ ಜನವರಿ ೧ರಿಂದ ಡಿಸೆಂಬರ್ ೩೧ರ ಒಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ಕಾವ್ಯ, ನವಕವಿಗಳ ಪ್ರಥಮ ಕವನ ಸಂಕಲನ, ಕಾವ್ಯ ಹಸ್ತಪ್ರತಿ, ಕಾದಂಬರಿ, ಸಣ್ಣಕತೆ, ನಾಟಕ, ಲಲಿತ ಪ್ರಬಂಧ, ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ/ ಆತ್ಮಕಥೆ, ಸಾಹಿತ್ಯ ವಿಮರ್ಶೆ, ಗ್ರಂಥ ಸಂಪಾದನೆ, ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ, ಮಾನವಿಕ, ಸಂಶೋಧನೆ, ವೈಚಾರಿಕ/ ಅಂಕಣ ಬರಹ, ಅನುವಾದ (ಕನ್ನಡದಿಂದ ಅನ್ಯಭಾಷೆಗಳಿಗೆ ಅನುವಾದಗೊಂಡ ಹಾಗೂ ಇಂಗ್ಲೀಷ್ ಸೇರಿದಂತೆ ಭಾರತೀಯ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡ ಕೃತಿಗಳು), ಲೇಖಕರ ಮೊದಲ ಸ್ವತಂತ್ರ ಕೃತಿ, ಕನ್ನಡದಿಂದ ಇಂಗ್ಲೀಷ್‌ಗೆ ಅನುವಾದ, ದಾಸ ಸಾಹಿತ್ಯ ಮತ್ತು ಸಂಕೀರ್ಣದಂತಹ ಪ್ರಕಾರಗಳ ಕೃತಿಗಳನ್ನು  ಬಹುಮಾನಕ್ಕಾಗಿ ಜೂನ್ ೧೫ರೊಳಗೆ ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು ಇವರಿಗೆ ಅಂಚೆ ಅಥವಾ ಕೊರಿಯರ್ ಮೂಲಕ ಸಲ್ಲಿಸಬಹುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News