ಅನುತ್ತೀರ್ಣಳಾಗಿದ್ದ ವಿದ್ಯಾರ್ಥಿನಿ 104 ಅಂಕಗಳೊಂದಿಗೆ ಉತ್ತೀರ್ಣ; ಹೊರೈಝನ್ ಪಬ್ಲಿಕ್ ಸ್ಕೂಲ್‌ಗೆ ಶೇ.100 ಫಲಿತಾಂಶ

Update: 2022-05-22 17:06 GMT

ಮಂಗಳೂರು : ಕನ್ನಡ ವಿಷಯದಲ್ಲಿ 17 ಅಂಕಗಳನ್ನು ಪಡೆದು ಅನುತ್ತೀರ್ಣಳಾಗಿದ್ದ ಪ್ರತಿಭಾವಂತ ವಿದ್ಯಾರ್ಥಿನಿ ಮರು ಮೌಲ್ಯಮಾಪನಕ್ಕಾಗಿ ಸಲ್ಲಿಸಿದ್ದ ಉತ್ತರ ಪತ್ರಿಕೆಯನ್ನು ಪರಿಶೀಲಿಸಿದಾಗ 104 ಅಂಕಗಳೊಂದಿಗೆ ತೇರ್ಗಡೆಯಾಗಿದ್ದು, ಇದರೊಂದಿಗೆ ಹೊರೈಝನ್ ಪಬ್ಲಿಕ್ ಸ್ಕೂಲ್  ಸತತ ಎರಡನೆ ವರ್ಷ 100% ಫಲಿತಾಂಶದ ಸಾಧನೆ ಮಾಡಿದೆ.

ಕಳೆದ ಸಾಲಿನಲ್ಲಿ ಪರೀಕ್ಷೆ ಬರೆದ 37 ವಿದ್ಯಾರ್ಥಿಗಳು ಕೂಡಾ ಉತ್ತೀರ್ಣರಾಗಿರುತ್ತಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News