ರಾಜ್ಯದಲ್ಲಿ ರವಿವಾರ 167 ಮಂದಿಗೆ ಕೊರೋನ ದೃಢ: ಸಾವಿನ ಸಂಖ್ಯೆ ಶೂನ್ಯ

Update: 2022-05-22 17:48 GMT

ಬೆಂಗಳೂರು, ಮೇ 22: ರಾಜ್ಯದಲ್ಲಿ ರವಿವಾರ 167 ಹೊಸ ಕೊರೋನ ಪ್ರಕರಣಗಳು ದೃಢವಾಗಿದ್ದು, 101 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 39,50,545ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,064ಕ್ಕೆ ತಲುಪಿದೆ.        
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 1,721ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.   

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 167 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬೆಂಗಳೂರು ನಗರ 161, ಚಿಕ್ಕಮಗಳೂರು 1, ದಕ್ಷಿಣ ಕನ್ನಡ 3, ಮೈಸೂರು 1, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ. 
 
ರಾಜಧಾನಿಯಲ್ಲಿ 161 ಜನರಿಗೆ ಕೊರೋನ ದೃಢ

ಬೆಂಗಳೂರು, ಮೇ 22: ರಾಜಧಾನಿಯಲ್ಲಿ ರವಿವಾರದಂದು 161 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಒಟ್ಟು 17,67,652  ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 17,86,266   ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,963 ಜನರು ಸೋಂಕಿಗೆ ಬಲಿಯಾಗಿದ್ದಾರೆ. 

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News