ಆರೋಗ್ಯ ತಪಾಸಣೆ ಶಿಬಿರ ಅಧಿಕಗೊಳ್ಳಬೇಕು: ಜಿ.ಸಿ.ಚಂದ್ರಶೇಖರ್

Update: 2022-05-22 18:52 GMT

ಬೆಂಗಳೂರು, ಮೇ 22: ದೇಶದಲ್ಲಿ ಕೋಟ್ಯಾಂತರ ಜನರು ಸಮರ್ಪಕ ವೈದ್ಯಕೀಯ ಚಿಕಿತ್ಯೆ ಲಭಿಸದೇ ಮೃತ ಪಡುತ್ತಿದ್ದು, ಇಂತಹ ಪರಿಸ್ಥಿತಿಯಲ್ಲಿ ಆರೋಗ್ಯ ತಪಾಸಣೆ ಶಿಬಿರಗಳು ಅಧಿಕಗೊಳ್ಳಬೇಕು ಎಂದು ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಅಭಿಪ್ರಾಯಪಟ್ಟರು.

ರವಿವಾರ ನಗರದ ಮಹಾಲಕ್ಷ್ಮೀಪುರಂ ವಾರ್ಡಿನ ಬಯಲು ರಂಗ ಮಂದಿರದಲ್ಲಿ ಸ್ಪೂರ್ತಿ ಯುವಕರ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು ನೇತ್ರ ತಪಾಸಣಾ ಶಿಬಿರದಲ್ಲಿ ವರು ಮಾತನಾಡಿದರು.

ಮನುಷ್ಯನಿಗೆ ಜೀವನದಲ್ಲಿ ಆರೋಗ್ಯ ಮುಖ್ಯವಾಗಿದೆ. ಈ ಹಿಂದೆ ಕೊರೋನ ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ ಆರೋಗ್ಯದ ಅರಿವು ಮೂಡಿದೆ.ಜತೆಗೆ, ಜನರು ಇದರಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ.ಇಂತಹ ಸಂದರ್ಭದಲ್ಲಿ ಬಡ ಮತ್ತು ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎಂ.ಶಿವರಾಜು ಮಾತನಾಡಿ,  ಮಹಾಲಕ್ಷ್ಮೀಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲ ವಾರ್ಡ್‍ಗಳಲ್ಲಿ ಪ್ರತಿ ತಿಂಗಳು ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗುವುದು. ಜತೆಗೆ, ರೋಗ ಮುಕ್ತ ಸಮಾಜ ನಿರ್ಮಾಣದ ಗುರಿ ಹೊಂದಿದ್ದೇವೆ ಎಂದು ಹೇಳಿದರು. 

ಬಿಬಿಎಂಪಿ ಮಾಜಿ ಸದಸ್ಯ ಎಸ್.ಕೇಶವಮೂರ್ತಿ ಮಾತನಾಡಿ, ಈ ವಾರ್ಡಿನಲ್ಲ್ಲಿ ಮಧ್ಯಮ ವರ್ಗದವರು ಹೆಚ್ಚಿನ ಜನಸಂಖ್ಯೆಯಲ್ಲಿ ವಾಸವಿದ್ದಾರೆ. ಆಧುನಿಕ ಜೀವನಶೈಲಿ ಮತ್ತು ಆಹಾರ ಪದ್ಧತಿ, ವಯೋಸಹಜ ಕಾಯಿಲೆಯಿಂದ ಬಳಲುತ್ತಿರುತ್ತಾರೆ.ಇಂತಹ ಮಂದಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಧೀಂದ್ರ, ಪರಿಸರ ರಾಮಕೃಷ್ಣ ಸೇರಿದಂತೆ ಪ್ರಮುಖರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News