ಉಡುಪಿ: ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಅಧಿಕಾರ ಸ್ವೀಕಾರ

Update: 2022-05-23 05:42 GMT

ಉಡುಪಿ, ಮೇ 23: ಉಡುಪಿ ಜಿಲ್ಲೆಯ ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಇಂದು ಅಧಿಕಾರ ಸ್ವೀಕರಿಸಿದರು.

ಅವರು ತುಮಕೂರು ಜಿಲ್ಲೆಯ ಕುಟುಂಬ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಈ ಹಿಂದೆ  ಉಡುಪಿ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿದ್ದ ಜೆ.ಎನ್.ಸುಬ್ರಹ್ಮಣ್ಯ ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಅವರ ನೇಮಕವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News