ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ: ಐವರ ಬಂಧನ, 30 ಸೆಲ್ ಫೋನ್ ವಶ

Update: 2022-05-23 06:20 GMT

ಪುಣೆ: ಪಿಂಪಲ್ ಸೌದಾಗರ್‌ನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಐವರನ್ನು ಪಿಂಪ್ರಿ ಚಿಂಚ್‌ವಾಡ್ ಪೊಲೀಸರು ಬಂಧಿಸಿದ್ದಾರೆ ಹಾಗೂ  30 ಮೊಬೈಲ್ ಫೋನ್‌ಗಳು, ಮೂರು ಲ್ಯಾಪ್‌ಟಾಪ್‌ಗಳು ಹಾಗೂ ಎಣಿಕೆ ಯಂತ್ರವನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯದ ಮೇಲೆ  ಬೆಟ್ಟಿಂಗ್ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

 “ಆರೋಪಿಗಳು ಶನಿವಾರ ನಡೆದ  ಐಪಿಎಲ್ ಕ್ರಿಕೆಟ್ ಪಂದ್ಯದ ಮೇಲೆ  ಸೆಲ್ ಫೋನ್ ಬಳಸಿ ಆನ್‌ಲೈನ್‌ನಲ್ಲಿ ಬೆಟ್ಟಿಂಗ್ ನಡೆಸುತ್ತಿರುವುದು ಕಂಡುಬಂದಿದೆ. ದಾಳಿ ನಡೆಸಿದ ಅಪಾರ್ಟ್‌ಮೆಂಟ್‌ನಲ್ಲಿ ಕೆಲವು ದಿನಗಳಿಂದ ಅಕ್ರಮ ಬೆಟ್ಟಿಂಗ್ ದಂಧೆ ನಡೆಸುತ್ತಿರುವ ಶಂಕೆ ವ್ಯಕ್ತವಾಗಿದೆ. ಹಣಕಾಸಿನ ವಿವರಗಳು ಮತ್ತು ಬೆಟ್ಟಿಂಗ್ ಲೆಕ್ಕಾಚಾರಗಳನ್ನು ನಿರ್ವಹಿಸುತ್ತಿದ್ದ ಆರೋಪಿಗಳ  ಡೈರಿಗಳನ್ನು ನಾವು ವಶಪಡಿಸಿಕೊಂಡಿದ್ದೇವೆ. ಹೆಚ್ಚಿನ ತನಿಖೆ ನಡೆಯುತ್ತಿದೆ ”ಎಂದು ಸಾಂಗ್ವಿ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಎ. ಎಸ್. ದೇಶಮುಖ್ ಹೇಳಿದ್ದಾರೆ.

ಸುಳಿವಿನ ಮೇರೆಗೆ ಪೊಲೀಸ್ ತಂಡವು ಮೇ 21 ರಂದು ರಾತ್ರಿ 9.30 ರ ಸುಮಾರಿಗೆ ಪಿಂಪಲ್ ಸೌದಾಗರ್‌ನ ಮಲ್ಪಾನಿ ​​ಎಸ್ಟೇಟ್‌ನಲ್ಲಿರುವ ದಿ ಕ್ರೆಸ್ಟ್ ಸೊಸೈಟಿಯಲ್ಲಿರುವ ಅಪಾರ್ಟ್‌ಮೆಂಟ್ ಮೇಲೆ ದಾಳಿ ನಡೆಸಿತು. ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್  ನಡುವಿನ ಐಪಿಎಲ್ ಪಂದ್ಯದ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಗಳನ್ನು ಪೊಲೀಸರು ಹಿಡಿದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News