ಬಾಡಿಗೆ ಭಾಷಣಕಾರರನ್ನು ಕೂರಿಸಿ ಮಕ್ಕಳಿಗೆ ಸುಳ್ಳಿನ ಶೂರರ ಪಾಠ ಹೇಳಿಸುವುದು ವಿಪರ್ಯಾಸ: ಪ್ರಿಯಾಂಕ್ ಖರ್ಗೆ

Update: 2022-05-23 10:01 GMT

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ರಾಜಕೀಯ ನಾಯಕರು ಸೇರಿದಂತೆ ಹಲವರು ಸಾಮಾಜಿಕ ಜಾಲತಾಣದಲ್ಲಿ ರೋಹಿತ್ ಚಕ್ರತೀರ್ಥ ವಿರುದ್ಧ ಕಿಡಿಗಾರಿದ್ದಾರೆ.

ಈ ಮಧ್ಯೆ ಕುವೆಂಪುರನ್ನು ಅವಮಾನಿಸಿರುವ ರೋಹಿತ್ ಚಕ್ರತೀರ್ಥರ ಹಳೆಯ ಫೇಸ್ ಬುಕ್ ಪೋಸ್ಟ್ ಒಂದು ವೈರಲ್ ಆಗುತ್ತಿದ್ದು,  ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ , 'ಕೂಡಲೇ ರೋಹಿತ್‌ ಚಕ್ರತೀರ್ಥರನ್ನು ಕಿತ್ತೆಸೆದು ಮಕ್ಕಳ ಭವಿಷ್ಯ ಕಾಪಾಡಬೇಕು’ ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

''ಶಿಕ್ಷಣ ತಜ್ಞರು, ವಿದ್ವಾಂಸರು ಇರಬೇಕಾದ ಪಠ್ಯ ಪುಸ್ತಕ ಸಮಿತಿಗೆ  2 ಟ್ರಾಲ್‌ಗಳು, ಬಿಜೆಪಿಯ ಬಾಡಿಗೆ ಭಾಷಣಕಾರರನ್ನು ಕೂರಿಸಿ ಮಕ್ಕಳಿಗೆ ಸುಳ್ಳಿನ ಶೂರರ ಪಾಠ ಹೇಳಿಸುವುದು ವಿಪರ್ಯಾಸ. ನಾಡು, ನುಡಿಗೆ, ಕುವೆಂಪುರಂತಹವರಿಗೆ ಅವಮಾನಿಸಿದ ಈತನ ಟ್ರಾಲ್ ಪಾಂಡಿತ್ಯವೇ ಅರ್ಹತೆಯೇ? ಕೂಡಲೇ ಈತನನ್ನು(ರೋಹಿತ್‌ ಚಕ್ರತೀರ್ಥ) ಕಿತ್ತೆಸೆದು ಮಕ್ಕಳ ಭವಿಷ್ಯ ಕಾಪಾಡಬೇಕು ಸರ್ಕಾರ'' ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News