ಮೇಕೆದಾಟು ಪಾದಯಾತ್ರೆ ವೇಳೆ ಕಾನೂನು ಉಲ್ಲಂಘನೆ ಆರೋಪ: ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಸಮನ್ಸ್

Update: 2022-05-23 10:30 GMT

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಯ್ಯಗೆ ಮೇ.24ರಂದು ಅಡಿಷನಲ್ ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿ ಸಮನ್ಸ್ ಜಾರಿ ಮಾಡಲಾಗಿದೆ.

ಮೇಕೆದಾಟು ಪಾದಯಾತ್ರೆ ವೇಳೆ ಕಾನೂನು ಉಲ್ಲಂಘನೆ ಆರೋಪಕ್ಕೆ ಸಮನ್ಸ್ ಜಾರಿ ಮಾಡಲಾಗಿದೆ. 

ಕಾಂಗ್ರೆಸ್‌ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಜನವರಿ 9ರಂದು ಕನಕಪುರದಲ್ಲಿ ಪಾದಯಾತ್ರೆ ಆರಂಭಿಸಿದ್ದರು. ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಆಗಿದ್ದ ಕಾರಣ ಪಾದಯಾತ್ರೆ ವಿರುದ್ಧ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು.  ಬಳಿಕ  ಹೈಕೋರ್ಟ್‌  ನಿರ್ದೇಶನ ಆಧರಿಸಿ ಜ.13ಕ್ಕೆ ರಾಮನಗರದಲ್ಲಿ ಪಾದಯಾತ್ರೆ ಅಂತ್ಯಗೊಳಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News