ಶಿವಮೊಗ್ಗ: ಒಂದೇ ಬಾರಿಗೆ ನಾಲ್ಕು ಮಕ್ಕಳನ್ನು ಹೆತ್ತ ತಾಯಿ!

Update: 2022-05-24 09:14 GMT

ಶಿವಮೊಗ್ಗ, ಮೇ.23: ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಘಟನೆ  ಸೋಮವಾರ ನಡೆದಿದೆ.

ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಭದ್ರಾವತಿ ತಾಲೂಕಿನ ತಡಸಾ ಗ್ರಾಮದ ಆಲ್ಮಾಸ್ ಬಾನು ಅವರಿಗೆ ಸೋಮವಾರ  ಬೆಳಗ್ಗೆ ಹೆರಿಗೆಯಾಗಿದ್ದು, ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಎರಡು ಗಂಡು ಮತ್ತು ಎರಡು ಹೆಣ್ಣು ಮಕ್ಕಳಾಗಿದ್ದು ಮಕ್ಕಳು ಹಾಗೂ ತಾಯಿ ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.

ವೈದ್ಯಕೀಯ ಕ್ಷೇತ್ರದ ಪ್ರಕಾರ ನಾಲ್ಕು ಮಕ್ಕಳಿಗೆ ಜನ್ಮ ನೀಡುವ ಪ್ರಕರಣಗಳು ತುಂಬಾ ವಿರಳ. 5.12 ಲಕ್ಷ ಜನರಲ್ಲಿ ಒಬ್ಬರು ಮಾತ್ರ ಈ ರೀತಿಯಾಗಿ ನಾಲ್ಕು ಮಕ್ಕಳಿಗ ಜನ್ಮ ನೀಡುವುದು ಕಂಡು ಬರುತ್ತದೆ. ಅವಳಿ-ಜವಳಿ, ತ್ರಿವಳಿ ಮತ್ತು 4ಮಕ್ಕಳಾಗುವುದಕ್ಕೆ ಅನುವಂಶಿಯ ಅಂಶಗಳೇ ಕಾರಣ ಎಂದು ಹೆರಿಗೆ ಮಾಡಿಸಿದ ಆಸ್ಪತ್ರೆಯ ಹಿರಿಯ ಸ್ತ್ರೀ ಮತ್ತು ಪ್ರಸೂತಿ ರೋಗ ತಜ್ಞೆ ಡಾ.ಚೇತನಾ ಎನ್.ತಿಳಿಸಿದ್ದಾರೆ.

ಆಸ್ಪತ್ರೆಯ ನವಜಾತ ಶಿಶುಗಳ ಮತ್ತು ಮಕ್ಕಳ ತಜ್ಞ ಡಾ. ಅನಿಲ್.ಬಿ.ಕಲ್ಲೇಶ್ ಮಾತನಾಡಿ, ನಾಲ್ಕೂ ಮಕ್ಕಳು ನವಜಾತ ಶಿಶುಗಳು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನಾಲ್ಕೂ ಶಿಶುಗಳು 1.1, 1.2, 1.3 ಹಾಗೂ 1.8 ಕೆ.ಜಿ. ತೂಕ ಹೊಂದಿದ್ದಾರೆ ಎಂದು ಹೇಳಿದರು.

ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಧನಂಜಯ ಸರ್ಜಿ ಮಾತನಾಡಿ, ನಮ್ಮ ಆಸ್ಪತ್ರೆಯಲ್ಲಿ ಪ್ರಪ್ರಥಮ ಬಾರಿಗೆ ಈ ರೀತಿಯಾಗಿ 4 ಮಕ್ಕಳಿಗೆ ಜನ್ಮ ನೀಡಿರುವುದು ಬಹಳ ಸಂತೋಷ ವಿಷಯ. ಹಾಗೂ ಎಲ್ಲಾ ಶಿಶುಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಆ ಶಿಶುಗಳಿಗೆ ಅತೀ ಕಡಿಮೆ ದರದಲ್ಲಿ ಇವರಿಗೆ ಚಿಕಿತ್ಸೆ ಒದಗಿಸಿಕೊಡುತ್ತೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಆಸ್ಪತ್ರೆಯಆಡಳಿತಾಧಿಕಾರಿ ಕೆ.ಆರ್. ಪುರುಷೋತ್ತಮ ಇದ್ದರು. 

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News