ವಿಧಾನ ಪರಿಷತ್ ಚುನಾವಣೆ: ಬಸವರಾಜ ಹೊರಟ್ಟಿ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ ಜೆಡಿಎಸ್‍

Update: 2022-05-23 18:33 GMT
 ಶ್ರೀಶೈಲ ನಿಂಗಪ್ಪ ಗಡದಿನ್ನಿ    |    ಚಂದ್ರಶೇಖರ ಇ ಲೋಣಿ

ಬೆಂಗಳೂರು: ಜೆಡಿಎಸ್ ತೊರೆದು ಬಿಜೆಪಿ ಸೇರಿರುವ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಪ್ರತಿನಿಧಿಸುತ್ತಿದ್ದ ಕ್ಷೇತ್ರ ಪಶ್ಚಿಮ ಶಿಕ್ಷಕರ ಬೆಂಗಳೂರು, ಮೇ 23: ವಿಧಾನ ಪರಿಷತ್ ನಿಕಟಪೂರ್ವ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರತಿನಿಧಿಸುತ್ತಿದ್ದ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯನ್ನಾಗಿ ಶ್ರೀಶೈಲ ನಿಂಗಪ್ಪ ಗಡದಿನ್ನಿ ಅವರನ್ನು ಕಣಕ್ಕಿಳಿಸಿದೆ.

ಇದೇ ವೇಳೆ ಜೆಡಿಎಸ್ ವಾಯವ್ಯ ಶಿಕ್ಷಕರ ಕ್ಷೇತ್ರದಿಂದ ಚಂದ್ರಶೇಖರ ಇ.ಲೋಣಿ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಪದವೀಧರ ಕ್ಷೇತ್ರಗಳಿಗೆ ಶೀಘ್ರದಲ್ಲೆ ಪಕ್ಷದಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ನಾನು ಮುಖ್ಯಮಂತ್ರಿ ಆಗಿದ್ದಾಗ ಶಿಕ್ಷಕರ ಕ್ಷೇತ್ರಕ್ಕೆ ಅಪಾರ ಕೊಡುಗೆ ಕೊಟ್ಟಿದ್ದೇನೆ. ಜೂನ್ 3ರ ನಂತರ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ನಾನೇ ಎರಡು ದಿನಗಳ ಪ್ರವಾಸ ಮಾಡುತ್ತೇನೆ. ಅಲ್ಲಿ ಶಿಕ್ಷಕರ ಬಳಿ ಮತಯಾಚನೆ ಮಾಡುತ್ತೇನೆ. ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೇ 26ಕ್ಕೆ ಕೊನೆಯ ದಿನವಾಗಿದೆ ಎಂದು ಹೇಳಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹೀಂ ಅವರು ಆಕಾಂಕ್ಷಿಯಾಗಿದ್ದರು. ಆದರೆ, ಪಕ್ಷ ಸಂಘಟನೆಗಾಗಿ ಪಕ್ಷದ ತೀರ್ಮಾನಕ್ಕೆ ಎಲ್ಲ ರೀತಿ ಸಹಮತ ಇರುತ್ತದೆ. ನಮ್ಮಲ್ಲಿ ಸಮಸ್ಯೆ ಏನೂ ಇಲ್ಲ. ರಾಜ್ಯಸಭೆ ಚುನಾವಣೆಗೆ ಇನ್ನು ಸಮಯ ಇದೆ. ಮೂರ್ನಾಲ್ಕು ಮಂದಿ ಆಕಾಂಕ್ಷಿಗಳು ಇದ್ದಾರೆ. ಯಾರಲ್ಲೂ ಅಸಮಾಧಾನವಿಲ್ಲ. ಎಲ್ಲರ ಸಹಮತದೊಂದಿಗೆ ನಾನು, ಇಬ್ರಾಹೀಂ ಹಾಗೂ ಪಕ್ಷದ ವರಿಷ್ಠ ದೇವೇಗೌಡರು ಚರ್ಚೆ ಮಾಡುತ್ತೇವೆ' ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News