ಪೆಟ್ರೋಲ್, ಡೀಸೆಲ್ ಬೆಲೆ ಇಳಿಸಿ, ಪೂರೈಕೆ ಕಡಿತಗೊಳಿಸಿರುವುದರಿಂದ ಸಮಸ್ಯೆ: ಯು.ಟಿ. ಖಾದರ್

Update: 2022-05-23 15:48 GMT

ಮಂಗಳೂರು: ಕೇಂದ್ರ ಸರಕಾರ ಪೆಟ್ರೋಲ್, ಡೀಸೆಲ್ ಪೂರಕೈಯಲ್ಲಿ ರೇಷನಿಂಗ್ ಮಾಡಲು ಹೊರಟಿರುವುದರಿಂದ ವ್ಯತ್ಯಯ ಉಂಟಾಗಿದೆ ಎಂದು ಶಾಸಕ ಹಾಗೂ ವಿಧಾನಸಭಾ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಕೇಂದ್ರ ಸರಕಾರ ಚುನಾವಣೆಯ ನಂತರ ಪೆಟ್ರೋಲ್, ಡೀಸೆಲ್ ಮೇಲಿನ ಸುಂಕ ಹೆಚ್ಚಿಸಿ ಇದೀಗ ವಿತರಕರಿಗೆ ಪೂರೈಕೆಯಲ್ಲಿ ಕಡಿತ ಉಂಟು (ರೇಷನಿಂಗ್ ಮೂಲಕ) ಮಾಡಿರುವುದರಿಂದ ಸಮಸ್ಯೆ ಉಂಟಾಗುತ್ತಿದೆ ಎಂದು ಯು.ಟಿ.ಖಾದರ್ ತಿಳಿಸಿದ್ದಾರೆ.

ಶಬ್ದ ಮಾಲಿನ್ಯದ ವಿಚಾರದಲ್ಲಿ ನಿಯಮಾವಳಿಗಳ ಬಗ್ಗೆ ಸಾರ್ವಜನಿಕರಲ್ಲಿ ಸಾಕಷ್ಟು ಗೊಂದಲವಿದೆ. ಇದರಿಂದ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವವರು ಗೊಂದಲದಲ್ಲಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿ ಸೂಕ್ತ ತೀರ್ಮಾನ ಕೈಗೊಂಡು ಗೊಂದಲಕ್ಕೆ ಅವಕಾಶ ಮಾಡಿ ಕೊಡಬಾರದು ಎಂದು ಖಾದರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ದ.ಕ ಕಾಂಗ್ರೆಸ್ ಮುಖಂಡರಾದ ಕೋಡಿಜಾಲ್ ಇಬ್ರಾಹಿಂ, ಸದಾಶಿವ ಉಳ್ಳಾಲ್, ಮುಹಮ್ಮದ್ ಮೋನು, ಕಲಾವತಿ, ಮುಹಮ್ಮದ್ ಕುಂಜತ್ತಬೈಲ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News