ಬಿಜೆಪಿಯದ್ದು ಹಿಟ್ಲರ್, ಮುಸ್ಲೋಲಿನಿ ಆಡಳಿತಕ್ಕಿಂತ ಕೆಟ್ಟದು: ಮಮತಾ ಬ್ಯಾನರ್ಜಿ

Update: 2022-05-23 17:36 GMT

ಕೋಲ್ಕತಾ, ಮೇ 22: ರಾಜ್ಯ ವ್ಯವಹಾರಗಳಲ್ಲಿ ಹಸ್ತಕ್ಷೇಪ ನಡೆಸಲು ಕೇಂದ್ರ ಸರಕಾರ ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ ಎಂದು ಸೋಮವಾರ ಆರೋಪಿಸಿರುವ ಪಶ್ಚಿಮಬಂಗಾಳದ ಮುಖ್ಯಮಂತ್ರಿ, ಬಿಜೆಪಿ ನೇತೃತ್ವದ ಸರಕಾರ ದೇಶದ ಒಕ್ಕೂಟ ವ್ಯವಸ್ಥೆಯನ್ನು ನೆಲಸಮಗೊಳಿಸುತ್ತಿದೆ ಎಂದು ಹೇಳಿದ್ದಾರೆ.

ಕೋಲ್ಕತ್ತಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬ್ಯಾನರ್ಜಿ, ಬಿಜೆಪಿಯ ಆಡಳಿತ ಅಡೋಲ್ಫ್ ಹಿಟ್ಲರ್, ಜೋಸೆಫ್ ಸ್ಟಾಲಿನ್ ಅಥವಾ ಬೆನಿಟೊ ಮುಸ್ಸೋಲಿನಿ ಆಡಳಿತಕ್ಕಿಂತ ಕೆಟ್ಟದಾಗಿದೆ ಎಂದರು. ಪ್ರಜಾಪ್ರಭುತ್ವವನ್ನು ರಕ್ಷಿಸಲು ಕೇಂದ್ರ ತನಿಖಾ ಸಂಸ್ಥೆಗಳಿಗೆ ಸ್ವಾಯತ್ತೆಯನ್ನು ನೀಡಬೇಕು ಎಂದು ಅವರು ಹೇಳಿದರು. ‘‘ರಾಜ್ಯದ ವ್ಯವಹಾರಗಳಲ್ಲಿ ಹಸ್ತಕ್ಷೇಪ ನಡೆಸಲು ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ. ಇಲ್ಲಿ ತುಗ್ಲಕ್ ಆಡಳಿತ ಜಾರಿಯಲ್ಲಿದೆ’’ ಎಂದು ಅವರು ಹೇಳಿದರು. ‘‘ಕೇಂದ್ರ ತನಿಖಾ ಸಂಸ್ಥೆಗಳಿಗೆ ಸ್ವಾಯತ್ತೆ ನೀಡಬೇಕು. ಯಾವುದೇ ರಾಜಕೀಯ ಹಸ್ತಕ್ಷೇಪ ಇಲ್ಲದೆ ಪಾರದರ್ಶಕವಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡಬೇಕು’’ ಎಂದು ಮಮತಾ ಬ್ಯಾನರ್ಜಿ ಹೇಳಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News