ಮಂಗಳೂರು: ದ.ಕ., ಉಡುಪಿ, ಕೊಡಗು ಜಿಲ್ಲೆಯ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ

Update: 2022-05-24 07:45 GMT

ಮಂಗಳೂರು : ಕರ್ನಾಟಕ ರಾಜ್ಯ ಹಜ್ ಸಮಿತಿಯ ಮೂಲಕ ದ.ಕ., ಉಡುಪಿ ಮತ್ತು ಕೊಡಗು ಜಿಲ್ಲೆಯಿಂದ ಯಾತ್ರೆ ಕೈಗೊಳ್ಳುವ 266 ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ ಕಾರ್ಯಕ್ರಮವು ಬೈಕಂಪಾಡಿಯ ಅಡ್ಕ ಸಮುದಾಯ ಭವನದಲ್ಲಿ ಇಂದು ನಡೆಯಿತು.

ಸಭಾ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ಉದ್ಘಾಟಿಸಿದರು.  ಬೈಕಂಪಾಡಿಯ ಮುಹಿಯ್ಯುದ್ದೀನ್ ಜುಮಾ ಮಸೀದಿಯ ಖತೀಬ್ ಹಸನುಲ್ ಮದನಿ ದುಆಗೈದರು.

ಸಭಾಧ್ಯಕ್ಷತೆ ವಹಿಸಿದ ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷ ಎನ್‌ಕೆಎಂ ಶಾಫಿ ಸಅದಿ ಮಾತನಾಡಿ, ಮಂಗಳೂರಿನಲ್ಲಿ ಹಜ್ ಭವನ ನಿರ್ಮಾಣಕ್ಕೆ ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ಮುಂದಿನ ವರ್ಷದ ನಮ್ಮೆಲ್ಲಾ ಹಜ್ ಕಾರ್ಯಕ್ರಮವು ಹಜ್ ಭವನದಲ್ಲಿ ನಡೆಯಲಿ ಎಂದು ಆಶಿಸಿದರು. ಹಜ್ ಭವನ‌‌ ನಿರ್ಮಾಣಕ್ಕೆ 10 ಕೋ.ರೂ‌. ಅನುದಾನ ಬಿಡುಗಡೆಯಾಗಿದೆ. ಆದರೆ ಸೂಕ್ತ ಜಾಗ ಲಭಿಸಿಲ್ಲ. ಜಾಗ ಸಿಕ್ಕಿದೊಡನೆ ಹಜ್ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಶಾಫಿ ಸ‌ಅದಿ ಹೇಳಿದರು.

ವೇದಿಕೆಯಲ್ಲಿ ಮಾಜಿ ಶಾಸಕ ಮೊಯ್ದಿನ್‌ ಬಾವ, ಸೆಂಟ್ರಲ್ ಮುಸ್ಲಿಂ ಕಮಿಟಿಯ ಉಪಾಧ್ಯಕ್ಷರಾದ ಹಾಜಿ ಇಬ್ರಾಹೀಂ ಕೋಡಿಜಾಲ್, ಕೆ. ಅಶ್ರಫ್, ಪುತ್ತುಬಾವ ಹಾಜಿ, ವಕ್ಫ್ ಸಲಹಾ ಸಮಿತಿಯ ಮಾಜಿ ಅಧ್ಯಕ್ಷ ಎಸ್.ಎಂ. ರಶೀದ್ ಹಾಜಿ, ಕರ್ನಾಟಕ ಹಜ್ ಸಮಿತಿ ಸದಸ್ಯರಾದ ಖುಸ್ರೋ ಖುರೇಶಿ, ಎ.ಬಿ. ಮುಹಮ್ಮದ್ ಹನೀಫ್ ನಿಝಾಮಿ, ಮೊಹೀನ್ ಖಾನ್, ಚಾಂದಾ ಪಾಶಾ, ವಿದ್ವಾಂಸರಾದ ಡಾ. ಅಬ್ದುರ‌್ರಶೀದ್ ಝೈನಿ ಕಾಮಿಲ್ ಮತ್ತು ಯು.ಕೆ. ಅಬ್ದುಲ್ ಅಝೀಝ್ ದಾರಿಮಿ, ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಉಪಾಧ್ಯಕ್ಷರಾದ ಎ.ಕೆ. ಜಮಾಲ್, ಫಕೀರಬ್ಬ, ಮಾಜಿ‌ ಉಪಮೇಯರ್ ಬಶೀರ್ ಬೈಕಂಪಾಡಿ, ಉದ್ಯಮಿ ಬಿ.ಎ‌.ನಝೀರ್, ಸಿಎಂ‌‌ ಮುಸ್ತಫಾ, ಅಹ್ಮದ್ ಬಾವಾ ಪಡೀಲ್, ಬೈಕಂಪಾಡಿ ಮಸೀದಿಯ ಪ್ರಧಾನ ಕಾರ್ಯದರ್ಶಿ ಹಸನ್ ಶಬೀರ್ ಉಪಸ್ಥಿತರಿದ್ದರು‌.

ದ.ಕ‌.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಸ್ವಾಗತಿಸಿದರು. ಸೈದುದ್ದೀನ್ ಕಾರ್ಯಕ್ರಮ ನಿರೂಪಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ರಾಜ್ಯ ಹಜ್ ಸಮಿತಿಯ ಮಾಜಿ ಸದಸ್ಯ ಕೆ.ಎಂ. ಅಬೂಬಕರ್ ಸಿದ್ದೀಕ್ ಮೋಂಟುಗೋಳಿ ಭಾಗವಹಿಸಿದ್ದರು.

2020-2021ರಲ್ಲಿ ಕೋವಿಡ್ ಕಾರಣದಿಂದಾಗಿ ವಿದೇಶಿ ಯಾತ್ರಿಕರಿಗೆ ನಿರ್ಬಂಧ ಹೇರಲಾಗಿತ್ತು. ಈ ಬಾರಿ ಸೀಮಿತ ಸಂಖ್ಯೆಯ ಯಾತ್ರಿಕರಿಗೆ ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ಯಾತ್ರೆಗೈಯಲು ಅವಕಾಶ ಕಲ್ಪಿಸಿಕೊಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News