ವರದಕ್ಷಿಣೆ ಕಿರುಕುಳದಿಂದ ವಿಸ್ಮಯಾ ಆತ್ಮಹತ್ಯೆ ಪ್ರಕರಣ: ಪತಿಗೆ 10 ವರ್ಷ ಜೈಲುಶಿಕ್ಷೆ ವಿಧಿಸಿದ ನ್ಯಾಯಾಲಯ

Update: 2022-05-24 07:53 GMT

ಕೊಚ್ಚಿ: ಕೇರಳದಾದ್ಯಂತ ವದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಕೇರಳ ಮಾತ್ರವಲ್ಲದೇ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಜೂನ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ 22 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ವಿಸ್ಮಯಾ ವಿ ನಾಯರ್ ರ ಪತಿಯನ್ನು ಕೇರಳದ ನ್ಯಾಯಾಲಯವು ವರದಕ್ಷಿಣೆ ಕಿರುಕುಳ ಸಾವಿನ ಪ್ರಕರಣದಲ್ಲಿ ಅಪರಾಧಿ ಎಂದು ಸೋಮವಾರ ತೀರ್ಪು ನೀಡಿತ್ತು. ಇದೀಗ 10 ವರ್ಷಗಳ ಜೈಲುಶಿಕ್ಷೆಯನ್ನು ವಿಧಿಸಿ ಕೊಲ್ಲಂ ನ್ಯಾಯಾಲಯ ತೀರ್ಪು ನೀಡಿದೆ ಎಂದು Thequint.com ವರದಿ ಮಾಡಿದೆ.

ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸುಜಿತ್ ಕೆಎನ್ ರವರು, ಮೃತ ಯುವತಿಯ ಪತಿ ಎಸ್ ಕಿರಣ್ ಕುಮಾರ್ ನನ್ನು ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ), 498-ಎ (ಮಹಿಳೆಯನ್ನು ಆತ್ಮಹತ್ಯೆಗೆ ಪ್ರೇರೇಪಿಸುವಂತಹ ಸ್ವಭಾವದ ಯಾವುದೇ ಉದ್ದೇಶಪೂರ್ವಕ ನಡವಳಿಕೆ) ಮತ್ತು ಭಾರತೀಯ ದಂಡ ಸಂಹಿತೆಯ 304-ಬಿ (ವರದಕ್ಷಿಣೆ ಸಾವು) ಪ್ರಕರಣಗಳಡಿಯಲ್ಲಿ ಅಪರಾಧಿ ಎಂದು ಘೋಷಿಸಿದ್ದಾರೆ. "ಅಪರಾಧಿಗೆ ಮರಣದಂಡನೆ ವಿಧಿಸುವಂತೆ ನಾವು ನ್ಯಾಯಾಲಯದಲ್ಲಿ ಮನವಿ ಮಾಡುತ್ತೇವೆ" ಎಂದು ವಿಸ್ಮಯಾ ಪೋಷಕರ ಪರ ವಕೀಲರು ಹೇಳಿಕೆ ನೀಡಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News