ಶಿವಮೊಗ್ಗ: ಗ್ಯಾಸ್ ಸಿಲಿಂಡರ್ ಸೋರಿಕೆ; ಮನೆಗೆ ಬೆಂಕಿ

Update: 2022-05-24 07:58 GMT

ಶಿವಮೊಗ್ಗ: ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಅಡುಗೆ ಕೋಣೆ ಹೊತ್ತಿ ಉರಿದ ಘಟನೆ ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿಪುರದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.

ಶಿವಮೊಗ್ಗ ತಾಲೂಕಿನ ಶಾಂತಿಪುರದ ಶ್ರೀಧರ್ ಎಂಬವರ ಮನೆಯಲ್ಲಿ ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆದಿದೆ.

ಗ್ಯಾಸ್ ಸೋರಿಕೆಯಿಂದ ಮನೆಯ ಹಲವು ವಸ್ತುಗಳಿಗೆ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿವೆ. ಆದರೆ ಮನೆಯವರು ಹಾಗೂ ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ.

ಬೆಂಕಿ ಹೊತ್ತಿದಾಗ ಮರಳು, ಹಸಿ ಗೋಣಿ ಚೀಲ ಹಾಕಿರುವ ಸ್ಥಳೀಯರು, ಬೆಂಕಿ ಮತ್ತಷ್ಟು ವ್ಯಾಪಿಸದಂತೆ ಕ್ರಮವಹಿಸಿದ್ದರಿಂದ ಆಗಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ. ನಂತರ ಸ್ಥಳಕ್ಕೆ ಆಗಮಿಸಿದ ಆಗ್ನಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು.

ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News