ರಾಷ್ಟ್ರಕವಿ ಕುವೆಂಪು ಪಾಠ ಬದಲಾವಣೆ ಇಲ್ಲ: ಸ್ಪಷ್ಟನೆ

Update: 2022-05-24 14:30 GMT

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರಿಗೆ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿಯಿಂದ ಅಮಾನಿಸಲಾಗಿದೆ ಎಂಬ ಆರೋಪದ ಬೆನ್ನಲ್ಲೇ ರಾಜ್ಯ ಪಠ್ಯ ಪುಸ್ತಕ ಸಂಘ ಸ್ಪಷ್ಟನೆಯನ್ನು ನೀಡಿದೆ. 

'' ಸುದ್ದಿ ಮಾಧ್ಯಮಗಳಲ್ಲಿ  ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿಯವರು 4ನೇ ತರಗತಿ 'ಪರಿಸರ ಅಧ್ಯಯ'ನ ಅಭ್ಯಾಸ ಸಹಿತ ಪಠ್ಯಪುಸ್ತಕವನ್ನು ಪರಿಷ್ಕರಿಸಿದ್ದು, ಕುವೆಂಪು ರವರ ಬಗ್ಗೆ ಇದ್ದ ವಿಷಯಾಂಶವನ್ನು ಕೈಬಿಡಲಾಗಿದೆ ಅಪಮಾನಗೊಳಿಸಲಾಗಿದೆ ಎಂದು ಪ್ರಸಾರವಾಗುತ್ತಿದ್ದು,  ವಾಸ್ತವವಾಗಿ 4ನೇ ತರಗತಿ ಪರಿಸರ ಅಧ್ಯಯನ ಅಭ್ಯಾಸ ಸಹಿತ ಪಠ್ಯಪುಸ್ತಕವನ್ನು ರೋಹಿತ್ ಚಕ್ರತೀರ್ಥ ಸಮಿತಿಯವರು ಪರಿಷ್ಕರಿಸಿರುವುದಿಲ್ಲ'' ಎಂದು ಸ್ಪಷ್ಟಪಡಿಸಿದೆ. 

'ಬರಗೂರು ರಾಮಚಂದ್ರಪ್ಪ ರವರ ಸಮಿತಿಯು 2017-18ನೇ ಸಾಲಿನಲ್ಲಿ ಪರಿಷ್ಕರಿಸಿದ್ದ 4ನೇ ತರಗತಿ ಪರಿಸರ ಅಧ್ಯಯನ ಅಭ್ಯಾಸ ಸಹಿತ ಪಠ್ಯಪುಸ್ತಕದ “ಪ್ರತಿಯೊಬ್ಬರೂ ವಿಶಿಷ್ಟ ಎಂಬ ಪಾಠದಲ್ಲಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ' (ಕುವೆಂಪು) ಶೀರ್ಷಿಕೆ ಅಡಿಯಲ್ಲಿ ಇದ್ದ - 9 ಸಾಲುಗಳ ವಿಷಯಾಂಶವನ್ನು 2022-23ನೇ ಸಾಲಿನ ಪರಿಸರ ಅಧ್ಯಯನ ಪಠ್ಯಪುಸ್ತಕದಲ್ಲೂ ಯಾವುದೇ ಬದಲಾವಣೆ ಇಲ್ಲದೆ ಮುಂದುವರಿಸಲಾಗಿದೆ' ಎಂದು ಪಠ್ಯ ಪುಸ್ತಕ ಸಂಘ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News