ವಿಧಾನಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Update: 2022-05-24 11:02 GMT

ಬೆಂಗಳೂರು: ರಾಜ್ಯ ವಿಧಾನಸಭೆಯ ಸದಸ್ಯರಿಂದ ರಾಜ್ಯ ವಿಧಾನಪರಿಷತ್ ಗೆ ನಡೆಯಲಿರುವ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.

ಲಕ್ಷ್ಮಣ ಸಂಗಪ್ಪ ಸವದಿ, ಎರಡನೆ ಅಭ್ಯರ್ಥಿಯಾಗಿ ಕೇಶವ ಪ್ರಸಾದ್ ಹಾಗೂ ಮೂರನೆ ಅಭ್ಯರ್ಥಿಯಾಗಿ ಛಲವಾದಿ ನಾರಾಯಣಸ್ವಾಮಿ, ನಾಲ್ಕನೇ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದರು.

ಈ ಸಮಯದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಸಚಿವರಾದ ಉಮೇಶ್ ಕತ್ತಿ ಅವರು ಹಾಗೂ ಎರಡನೇ ಪ್ರತಿ ಸಲ್ಲಿಸುವ ಸಮಯದಲ್ಲಿ ಸಚಿವರಾದ ಅಶೋಕ ಹಾಗೂ ಸಿ.ಸಿ.ಪಾಟೀಲ್ ಉಪಸ್ಥಿತರಿದ್ದರು.

ಹೆಲಿಕಾಪ್ಟರ್‌ನಲ್ಲಿ ಬಂದ ಅಭ್ಯರ್ಥಿ: ಬಿಜೆಪಿ ಹೈಕಮಾಂಡ್ ಕೊನೆ ಘಳಿಗೆಯಲ್ಲಿ ಬಿಜೆಪಿಯ ರಾಜ್ಯ ಕಾರ್ಯದರ್ಶಿ ಹೇಮಲತಾ ನಾಯಕ್ ಅವರಿಗೆ ಟಿಕಟ್ ಘೋಷಿಸಿದ್ದು, ಟಿಕೆಟ್ ಘೋಷಣೆಯಾದ ಸಂದರ್ಭದಲ್ಲಿ ಹೇಮಲತಾ ನಾಯಕ್ ಕೊಪ್ಪಳದಲ್ಲಿ ಇದ್ದರು.  ನಾಮಪತ್ರ ಸಲ್ಲಿಕೆಗೆ ಇಂದು (ಮಂಗಳವಾರ) ಸಂಜೆ 4 ಗಂಟೆ ಕೊನೆಯ ಸಮಯವಾದ್ದರಿಂದ ಕೂಡಲೇ ಬಂದು ನಾಮಪತ್ರ ಸಲ್ಲಿಕೆ ಮಾಡಬೇಕು ಎಂಬ ಸೂಚನೆಯೂ ಬಂದಿತ್ತು. ತುಮಕೂರಿನಿಂದ ಅವರಿಗೆ ಹೆಲಿಕಾಪ್ಟರ್‌ ವ್ಯವಸ್ಥೆ ಮಾಡಲಾಗಿತ್ತು. ತುಮಕೂರಿನಿಂದ ಬೆಂಗಳೂರಿನ ಜಕ್ಕೂರು ಏರೋಡ್ರಮ್ ವರೆಗೆ ಅವರನ್ನು ಹೆಲಿಕಾಪ್ಟರ್‌ನಲ್ಲಿ ಕರೆತರಲಾಯಿತು. ಮಧ್ಯಾಹ್ನ 2 ಗಂಟೆ ವೇಳೆಗೆ ವಿಧಾನಸೌಧ ತಲುಪಿ ಬಿಜೆಪಿ ಅಭ್ಯರ್ಥಿಯಾಗಿ ಹೇಮಲತಾ ನಾಮಪತ್ರ ಸಲ್ಲಿಸಿದ್ದಾರೆ. 


ಬಿಜೆಪಿ ಅಭ್ಯರ್ಥಿ ಹೇಮಲತಾ ನಾಯಕ್

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News