ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ: ತನ್ನ ಪಾಠ ಸೇರ್ಪಡೆಗೆ ಅನುಮತಿ ನಿರಾಕರಿಸಿದ ಸಾಹಿತಿ ಡಾ. ಜಿ.ರಾಮಕೃಷ್ಣ

Update: 2022-05-24 18:27 GMT
ಡಾ. ಜಿ.ರಾಮಕೃಷ್ಣ

ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆಗೆ ವಿರೋಧ ವ್ಯಕ್ತಪಡಿಸಿರುವ ಇನ್ನೋರ್ವ ಸಾಹಿತಿ ಡಾ. ಜಿ.ರಾಮಕೃಷ್ಣ ,  ತಮ್ಮ ‍ಪಾಠ ಸೇರ್ಪಡೆಗೆ ಅನುಮತಿ ನಿರಾಕರಿಸಿದ್ದಾರೆ.

'ನನ್ನ ಯಾವುದಾದರು ಬರಹವನ್ನು ಆಯ್ಕೆ ಮಾಡಿಕೊಂಡಿದ್ದರೆ ಅದಕ್ಕೆ ನನ್ನ ಸಮ್ಮತಿ ಇರುವುದಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ. 

ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಅವರು, ' ನಮ್ಮ ರಾಜ್ಯದ ಶಾಲೆಗಳ ಪಠ್ಯಪುಸ್ತಕಗಳ ತಥಾಕಥಿತ ಪರಿಷ್ಕರಣೆಯು  ತೀರಾ ಅಪಾಮಾರ್ಗದಲ್ಲಿ ಸಾಗುತ್ತಿರುವುದು ಜಗಜ್ಜಾಹೀರಾಗಿದೆ. ಅದು ಕೇವಲ ಅಬದ್ಧ ಮತ್ತು ಅವೈಚಾರಿಕ ಪ್ರಕ್ರಿಯೆಯಾಗಿ ಉಳಿದಿಲ್ಲ. ಶಿಕ್ಷಣವನ್ನು ಕೆಟ್ಟ ರಾಜಕೀಯಕ್ಕೆ ಗುರಿಮಾಡಲಾಗುತ್ತಿರುವುದು ಸರ್ವಥಾ ಕ್ಷಮಾರ್ಹವಲ್ಲ. ಮಕ್ಕಳಿಗೆ ವಿಷ ಉಣಿಸುವುದು ಬೌದ್ಧಿಕ  ಕ್ಷೇತ್ರದಲ್ಲಿ  ದುರಂತ. 

ಈ ಹಿನ್ನೆಲೆಯಲ್ಲಿ ನನ್ನ ಯಾವುದೇ ಬರಹವನ್ನು ಪಠ್ಯಪುಸ್ತಕದ ಪರಿಧಿಯಿಂದ ಹೊರಗಿಡುವುದು ಸೂಕ್ತವೆಂದು ಭಾವಿಸಿ ನನ್ನ ಯಾವುದಾದರು ಬರಹವನ್ನು ಆಯ್ಕೆ ಮಾಡಿಕೊಂಡಿದ್ದರು ಅದಕ್ಕೆ ನನ್ನ ಸಮ್ಮತಿ ಇರುವುದಿಲ್ಲವೆಂಬುದನ್ನು ಖಚಿತಪಡಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ. 

ಇದನ್ನೂ ಓದಿ: ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರು ಮಹಾದೇವ ಪತ್ರ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News