×
Ad

ಮೇ 27ರಿಂದ 29ರವರೆಗೆ ಪಣಂಬೂರು ಬೀಚ್ ನಲ್ಲಿ ರಾಷ್ಟ್ರೀಯ ಸರ್ಫಿಂಗ್ ಚಾಂಪಿಯನ್ ಶಿಪ್

Update: 2022-05-25 11:18 IST

ಮಂಗಳೂರು, ಮೇ  25: ಪಣಂಬೂರು ಕಡಲ ತೀರದಲ್ಲಿ ಮೇ 27ರಿಂದ 29ರವರೆಗೆ ರಾಷ್ಟ್ರೀಯ ಸರ್ಫಿಂಗ್ ಚಾಂಪಿಯನ್ ಶಿಪ್ ಆಯೋಜಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಅವರು ಸರ್ಫಿಂಗ್ ಫೆಡರೇಶನ್ ಆಫ್ ಇಂಡಿಯಾ ಮತ್ತು ಮಂತ್ರ ಸರ್ಫ್ ಕ್ಲಬ್ ಸಹಭಾಗಿತ್ವದಲ್ಲಿ ಈ ಚಾಂಪಿಯನ್ ಶಿಪ್ ನಡೆಯಲಿದೆ ಎಂದರು.

ಪ್ರವಾಸೋದ್ಯಮ ಇಲಾಖೆಯಿಂದ 'ಇಂಡಿಯನ್ ಓಪನ್ ಆಫ್ ಸರ್ಫಿಂಗ್-2022'ಕ್ಕೆ 15 ಲಕ್ಷ ರೂ.ಗಳ ಪ್ರಾಯೋಜಕತ್ವವನ್ನು ನೀಡಲಾಗಿದೆ. 70ಕ್ಕೂ ಹೆಚ್ಚು ಕ್ರೀಡಾಪಟುಗಳು ರಾಜ್ಯ ಹಾಗೂ ಹೊರ ರಾಜ್ಯಗಳಿಂದ ರಾಷ್ಟ್ರೀಯ ಸರ್ಫಿಂಗ್ ಚಾಂಪಿಯನ್ ಗಳು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

2017ರಲ್ಲಿ ನಡೆದ 'ಇಂಡಿಯನ್ ಓಪನ್ ಆಫ್ ಸರ್ಫಿಂಗ್ ಬಳಿಕ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ Surf Tourism 20 ಪಟ್ಟು ಅಭಿವೃದ್ಧಿಯಾಗಿದೆ ಎಂದು ಸರ್ಫಿಂಗ್ ಫೆಡರೇಶನ್ ಆಫ್ ಇಂಡಿಯಾದ ಅಧ್ಯಕ್ಷ ಗೌರವ್ ಹೆಗ್ಡೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಾಣಿಕ್ಯ, ಮಂಗಳ ಸರ್ಫಿಂಗ್ ಕ್ಲಬ್ ನ ರಾಮ್ ಮೋಹನ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News