KGF-2 ಚಿತ್ರ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್‍ನಿಂದ ವಜಾ
Update: 2022-05-25 18:39 IST
ಬೆಂಗಳೂರು, ಮೇ 25: ಕೆಜಿಎಫ್ ಚಾಪ್ಟರ್ 2 ಚಿತ್ರದಲ್ಲಿ ಧೂಮಪಾನವನ್ನು ವೈಭವೀಕರಿಸಲಾಗಿದ್ದು, ಸಿನಿಮಾ ಬಿಡುಗಡೆಯಾದರೆ ಸಮಾಜದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆಯಿದೆ. ಹೀಗಾಗಿ, ಚಿತ್ರ ಬಿಡುಗಡೆ ತಡೆಹಿಡಿಯುವಂತೆ ಕೋರಿ ಸಲ್ಲಿಕೆಯಾಗಿದ್ದ ಪಿಐಎಲ್ ಅನ್ನು ಹೈಕೋರ್ಟ್ ವಜಾಗೊಳಿಸಿದೆ.
ಬೆಂಗಳೂರಿನ ಕ್ಯಾನ್ಸರ್ ರೋಗಿಗಳ ನೆರವು ಸಂಘ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ಸಿನೆಮಾ ಈಗಾಗಲೇ ಬಿಡುಗಡೆಯಾಗಿರುವುದರಿಂದ ಅರ್ಜಿಗೆ ಮಾನ್ಯತೆ ಇಲ್ಲ ಎಂದು ಅಭಿಪ್ರಾಯಪಟ್ಟಿತು.