ಮೇ 27ಕ್ಕೆ ಹೆಬ್ರಿಯ ವರಂಗದಲ್ಲಿ ಜಿಲ್ಲಾಧಿಕಾರಿಗಳ ನಡೆದ ಹಳ್ಳಿ ಕಡೆ
Update: 2022-05-25 19:24 IST
ಉಡುಪಿ : ಈ ತಿಂಗಳ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಮೇ 27ರ ಶನಿವಾರ ಬೆಳಗ್ಗೆ 10 ಗಂಟೆಗೆ ಹೆಬ್ರಿ ತಾಲೂಕಿನ ವರಂಗ ಗ್ರಾಮದ ಶ್ರೀವೆಂಕಟರಮಣ ದೇವಸ್ಥಾನ ಸಭಾಂಗಣದಲ್ಲಿ ನಡೆಯಲಿದೆ.
ವರಂಗ ಗ್ರಾಮಕ್ಕೆ ಒಳಪಡುವ ಸಾರ್ವಜನಿಕರು ಹಾಗೂ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ವರಂಗ ಗ್ರಾಮಕರಣಿಕರ ಕಚೇರಿಗೆ ನೀಡಿ, ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.