×
Ad

ಕ್ಲೀನ್ ಗ್ರೀನ್ ಉಡುಪಿ ಅಭಿಯಾನ

Update: 2022-05-25 19:26 IST

ಉಡುಪಿ :  ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸರ್ವೇಕ್ಷಣಾ ಘಟಕದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ನಗರದ ಸಿಟಿ ಬಸ್ ನಿಲ್ದಾಣ, ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ವ್ಯಾಪ್ತಿಯಲ್ಲಿ ಕ್ಲೀನ್ ಗ್ರೀನ್ ಉಡುಪಿ ಅಭಿಯಾನ ನಡೆಯಿತು.

ಅಭಿಯಾನದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರ್ತಿ ಮಂಜುಳಾ ಶೆಟ್ಟಿ, ಸಮಾಜ ಕಾರ್ಯಕರ್ತೆ ಶೈಲಾ ಶಾಮನೂರು, ಆಪ್ತ ಸಮಾಲೋಚಕ ದಿನೇಶ್, ಜಿಲ್ಲಾ ಸರ್ವೇಕ್ಷಣಾ ಘಟಕದ ಡಾಟಾ ಮ್ಯಾನೇಜರ್ ಕೀರ್ತಿ, ರಕ್ಷಿತಾ, ನಗರದ ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News