ಕೇರಳ: ಪೊಲೀಸ್ ವಶಕ್ಕೆ ಮಾಜಿ ಶಾಸಕ ಪಿ.ಸಿ. ಜಾರ್ಜ್
Update: 2022-05-25 22:06 IST
ಹೊಸದಿಲ್ಲಿ, ಮೇ 25: ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಶಾಸಕ ಪಿ.ಸಿ. ಜಾರ್ಜ್ ಅವರನ್ನು ಕೇರಳ ಪೊಲೀಸರು ಬುಧವಾರ ವಶಕ್ಕೆ ತೆಗೆದುಕೊಂಡಿದ್ದಾರೆ. ಜಾರ್ಜ್ ಅವರ ಬಂಧನ ವಿರೋಧಿಸಿ ಪಾಲಾರಿವಟ್ಟಂ ಪೊಲೀಸ್ ಠಾಣೆಯ ಎದುರು ಬಿಜೆಪಿಯ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಇದೇ ಸಂದರ್ಭ ಪಿಡಿಪಿಯ ಕಾರ್ಯಕರ್ತರು ಜಾರ್ಜ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಪೂಂಜಾರ್ನ ಮಾಜಿ ಶಾಸಕ ಪಿ.ಸಿ. ಜಾರ್ಜ್ ಅವರ ಜಾಮೀನು ಅರ್ಜಿಯನ್ನು ತಿರುವನಂತಪುರದ ಹೆಚ್ಚುವರಿ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಬುಧವಾರ ಬೆಳಗ್ಗೆ ತಿರಸ್ಕರಿಸಿತು ಹಾಗೂ ಜಾಮೀನು ಅರ್ಜಿ ತಿರಸ್ಕರಿಸುವಂತೆ ಕೋರಿ ರಾಜ್ಯ ಸರಕಾರ ಲ್ಲಿಸಿದ ಮನವಿಯನ್ನು ಸ್ವೀಕರಿಸಿತು.