ರಾಜ್ಯ ಮಟ್ಟದ ಕೆಪಿಸಿಸಿ ‘ನವ ಸಂಕಲ್ಪ ಶಿಬಿರ’ಕ್ಕೆ ಸಮಿತಿ ರಚನೆ

Update: 2022-05-25 17:48 GMT

ಬೆಂಗಳೂರು, ಮೇ 25: ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ವತಿಯಿಂದ ಇತ್ತೀಚೆಗೆ ರಾಜಸ್ಥಾನದ ಉದಯಪುರದಲ್ಲಿ ನಡೆದ ಚಿಂತನ ಶಿಬಿರದಲ್ಲಿ ಕೈಗೊಂಡ ನಿರ್ಧಾರದಂತೆ ರಾಜ್ಯಮಟ್ಟದ ನವ ಸಂಕಲ್ಪ ಶಿಬಿರವನ್ನು ಬೆಂಗಳೂರಿನಲ್ಲಿ ಜೂ.1 ಹಾಗೂ 2ರಂದು  ಆಯೋಜಿಸಲು ನಿರ್ಧರಿಸಲಾಗಿದ್ದು, ಅದರಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮಿತಿ ರಚನೆ ಮಾಡಿದ್ದಾರೆ.

ರಾಜ್ಯಮಟ್ಟದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಣೆ ಮಾಡುವುದು, ಪಂಚಾಯಿತಿ, ಬ್ಲಾಕ್, ಜಿಲ್ಲೆ ಹಾಗೂ ರಾಜ್ಯಮಟ್ಟದ ಸಮಿತಿಯಲ್ಲಿ ಖಾಲಿ ಇರುವ ಎಲ್ಲ ಸ್ಥಾನಗಳನ್ನು ಮುಂದಿನ 90 ರಿಂದ 180 ದಿನಗಳಲ್ಲಿ ಭರ್ತಿ ಮಾಡುವುದು, ರಾಜಕೀಯ ವಿಚಾರಗಳನ್ನು ಪ್ರಸ್ತುತ ಪಡಿಸಲು ‘ರಾಜಕೀಯ ವ್ಯವಹಾರಗಳ ಸಮಿತಿ’ಯನ್ನು ರಚನೆ ಮಾಡುವುದು ಈ ಶಿಬಿರದ ಕಾರ್ಯಸೂಚಿಯಾಗಿರಲಿದೆ.

ನವ ಸಂಕಲ್ಪ ಶಿಬಿರ ಸಮಿತಿ: ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅಧ್ಯಕ್ಷತೆಯಲ್ಲಿ ರಚನೆ ಮಾಡಿರುವ ಈ ಸಮಿತಿಯ ಸಂಚಾಲಕರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಅವರನ್ನು ನೇಮಿಸಲಾಗಿದೆ.

ಇದಲ್ಲದೆ, ಸದಸ್ಯರಾಗಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಶಾಸಕ ಕೃಷ್ಣ ಭೈರೇಗೌಡ, ಯುವ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಆರ್.ಧ್ರುವನಾರಾಯಣ್, ಮಾಜಿ ಸಭಾಪತಿ ಡಾ.ಬಿ.ಎಲ್.ಶಂಕರ್, ವಿ.ಆರ್.ಸುದರ್ಶನ್.

ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕ ಯು.ಟಿ.ಖಾದರ್, ವಿಧಾನಪರಿಷತ್ ವಿರೋಧ ಪಕ್ಷದ ಉಪ ನಾಯಕ ಕೆ.ಗೋವಿಂದರಾಜ್, ವಿಧಾನಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ್ ಕೆ.ರಾಥೋಡ್, ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ.ಅಜಯ್ ಸಿಂಗ್, ಎನ್‍ಎಸ್‍ಯುಐ ಹಾಗೂ ಮಹಿಳಾ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪದಾಧಿಕಾರಿಗಳು.

ರಾಜ್ಯಸಭಾ ಸದಸ್ಯರಾದ ಡಾ.ಎಲ್.ಹನುಮಂತಯ್ಯ, ಜಿ.ಸಿ.ಚಂದ್ರಶೇಖರ್, ಡಾ.ಸೈಯ್ಯದ್ ನಾಸಿರ್ ಹುಸೇನ್, ಮಾಜಿ ಸಂಸದ ಪ್ರೊ.ಎಂ.ವಿ.ರಾಜೀವ್ ಗೌಡ, ಶಾಸಕ ಪ್ರಿಯಾಂಕ್ ಖರ್ಗೆ, ಕೆಪಿಸಿಸಿ ಉಪಾಧ್ಯಕ್ಷ ಎಂ.ನಾರಾಯಣಸ್ವಾಮಿ ಪ್ರಧಾನ ಕಾರ್ಯದರ್ಶಿಗಳಾದ ವಿಜಯ್ ಕೆ.ಮುಳುಗುಂದ್, ಆರ್.ವಿ.ವೆಂಕಟೇಶ್, ಪ್ಯಾರಿ ಜಾನ್, ಶಾಸಕಿ ಆರ್.ಸೌಮ್ಯಾರೆಡ್ಡಿ, ಎಐಎಂಸಿ ಕಾರ್ಯದರ್ಶಿ ಡಾ.ಚಮನ್ ಫರ್ಝಾನಾ.

ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಎಂ., ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ವಿ.ಎಸ್.ಆರಾಧ್ಯ, ರಾಜ್ಯ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮುಹಮ್ಮದ್ ನಲಪಾಡ್, ರಾಜ್ಯ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಡಾ.ಬಿ.ಪುಷ್ಪಾ ಅಮರನಾಥ್, ಎನ್‍ಎಸ್‍ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಎನ್.ಜಿ. ಹಾಗೂ ಸೇವಾದಳದ ಮುಖ್ಯ ಆಯೋಜಕ ರಾಮಚಂದ್ರ ಎಂ. ಅವರನ್ನು ಸಮಿತಿಯ ಸದಸ್ಯರನ್ನಾಗಿ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News