ಅಕ್ರಮ ಹಣ ವರ್ಗಾವಣೆ ಪ್ರಕರಣ: ಡಿ.ಕೆ ಶಿವಕುಮಾರ್ ವಿರುದ್ಧ ಇಡಿಯಿಂದ ಜಾರ್ಜ್ ಶೀಟ್ ಸಲ್ಲಿಕೆ

Update: 2022-05-26 08:13 GMT
 ಡಿ.ಕೆ ಶಿವಕುಮಾರ್

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ ಆರೋಪಪಟ್ಟಿ ಸಲ್ಲಿಸಿದೆ.

2019ರಲ್ಲಿ ನಡೆದಿದ್ದ ದಾಳಿ ಸಂಬಂಧ ಇಡಿ ಅಧಿಕಾರಿಗಳು ದೆಹಲಿಯ ಇಡಿ ವಿಶೇಷ ಕೋರ್ಟ್ ಗೆ ಹೊಸದಾಗಿ ಆರೋಪಪಟ್ಟಿ ಸಲ್ಲಿಕೆ ಮಾಡಿದ್ದಾರೆ. 

ಐಟಿ ಇಲಾಖೆ ನೀಡಿದ ದೂರಿನ ಆಧಾರದ ಮೇಲೆ ಇಡಿ  ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಕುಮಾರ್ ಸದ್ಯ ಜಾಮೀನಿನ ಮೇಲೆ ಇದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News