ಶಿವಮೊಗ್ಗ: ಪರವಾನಗಿ ಇಲ್ಲದೆ ಬಂದೂಕು ರಿಪೇರಿ; 9 ನಾಡ ಬಂದೂಕು ಸಹಿತ ಆರೋಪಿ ಸೆರೆ

Update: 2022-05-26 10:54 GMT

ಶಿವಮೊಗ್ಗ : ಪರವಾನಗಿ ಇಲ್ಲದೆ ಬಂದೂಕು ರಿಪೇರಿ ಮಾಡುತ್ತಿದ್ದ ಆರೋಪ ಸಂಬಂಧ ಪೊಲೀಸರು ದಾಳಿ ನಡೆಸಿ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಆತನಿಂದ 9 ನಾಡ ಬಂದೂಕುಗಳನ್ನು  ವಶಕ್ಕೆ ಪಡೆದಿದ್ದಾರೆ.

ಪಾಲಾಕ್ಷಪ್ಪ (47) ಬಂಧಿತ ಆರೋಪಿ. ಭದ್ರಾವತಿ ತಾಲೂಕು ಶಂಕರಘಟ್ಟ ಗ್ರಾಮದ ಮನೆಯಲ್ಲಿ ಪಾಲಾಕ್ಷಪ್ಪ ನಾಡ ಬಂದೂಕುಗಳ ರಿಪೇರಿ ಮಾಡುತ್ತಿದ್ದ. ಖಚಿತ ಮಾಹಿತಿ ಹಿನ್ನೆಲೆ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಮನೆ ಮೇಲೆ ದಾಳಿ ನಡೆಸಿದ್ದಾರೆ.

ದಾಳಿ ವೇಳೆ ಪಾಲಾಕ್ಷಪ್ಪನ ಮನೆಯಲ್ಲಿ 9 ನಾಡ ಬಂದೂಕುಗಳು ಸಿಕ್ಕಿವೆ. ಅವುಗಳನ್ನು ವಶಕ್ಕೆ ಪಡೆಯಲಾಗಿದೆ. ಆಯುಧ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News