ಎಡಿಐಎಫ್ ಜತೆಗೆ ಗೌಪ್ಯ ಮಾಹಿತಿ ಹಂಚಿಕೆ ವಿಚಾರ: ಸಿಸಿಐ ನೀಡಿದ್ದ ಆದೇಶಕ್ಕೆ ಮಧ್ಯಂತರ ತಡೆ ಮುಂದುವರಿಸಿದ ಹೈಕೋರ್ಟ್

Update: 2022-05-26 13:40 GMT

ಬೆಂಗಳೂರು, ಮೇ 26: ಅಲಯನ್ಸ್ ಆಫ್ ಡಿಜಿಟಲ್ ಇಂಡಿಯಾ ಫೌಂಡೇಷನ್(ಎಡಿಐಎಫ್) ಜತೆಗೆ ಗೌಪ್ಯ ಮಾಹಿತಿ ಹಂಚಿಕೊಳ್ಳುವಂತೆ ಗೂಗಲ್ ಸಂಸ್ಥೆಗೆ ಭಾರತೀಯ ಸ್ಪರ್ಧಾ ಆಯೋಗ(ಸಿಸಿಐ) ಹೊರಡಿಸಿದ್ದ ಅದೇಶಕ್ಕೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ವಿಸ್ತರಿಸಿದೆ. 

ಎ.18ರಂದು ಸಿಸಿಐ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಗೂಗಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಗೂಗಲ್ ಎಲ್‍ಎಲ್‍ಸಿ, ಗೂಗಲ್ ಐರ್ಲೆಂಡ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠ ವಿಚಾರಣೆ ನಡೆಸಿತು. 

ಸ್ಪರ್ಧಾ ಆಯೋಗದ ಪರ ವಕೀಲರು, ಗೂಗಲ್ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಅರ್ಹವಾಗಿಲ್ಲ ಎಂದು ವಾದ ಮಂಡಿಸಿದರು. ಇದಕ್ಕೆ ಗೂಗಲ್ ಸಂಸ್ಥೆಯ ಪರ ವಕೀಲರು, ಆಕ್ಷೇಪ ವ್ಯಕ್ತಪಡಿಸಿದರು. ಆಗ ನ್ಯಾಯಪೀಠ, ಅರ್ಜಿ ವಿಚಾರಣೆಗೆ ಅರ್ಹವಲ್ಲ ಎಂಬ ಬಗ್ಗೆ ಸೂಕ್ತ ರೀತಿಯಲ್ಲಿ ಆಕ್ಷೇಪಣೆ ಸಲ್ಲಿಸಬಹುದು ಎಂದು ಸಿಸಿಐ ಪರ ವಕೀಲರಿಗೆ ಸೂಚಿಸಿ, ವಿಚಾರಣೆ ಮುಂದೂಡಿತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News