ಕಾಂಗ್ರೆಸ್‌ನಿಂದ ಡಿಕೆಶಿಯವರನ್ನು ಬಿಟ್ಟು ಬಹಳಷ್ಟು ಮಂದಿ ನಮ್ಮೊಂದಿಗೆ ಬರಲಿದ್ದಾರೆ: ನಳಿನ್ ಕುಮಾರ್ ಕಟೀಲ್

Update: 2022-05-26 13:54 GMT

ಬೆಳಗಾವಿ:  'ಡಿ.ಕೆ. ಶಿವಕುಮಾರ್‌ ಅವರನ್ನು ಬಿಟ್ಟು ಬಹಳಷ್ಟು ಮಂದಿ ನಮ್ಮೊಂದಿಗೆ ಬರಲಿದ್ದಾರೆ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಹೇಳಿದ್ದಾರೆ. 

ಬೆಳಗಾವಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ‘ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯವರಿಗೆ ಅಭ್ಯರ್ಥಿಯೇ ಇರಲಿಲ್ಲ’ ಎಂಬ ಕೆಪಿಸಿಸಿ ಅದ್ಯಕ್ಷ ಡಿ.ಕೆ ಶಿವಕುಮಾರ್‌ ಹೇಳಿಕೆಗೆ ಪ್ರತಿಕ್ರಿಯಿಸಿದರು. 

'ವಿಪಕ್ಷಗಳಿಂದ ಬಹಳಷ್ಟು ಮಂದಿ ನಮ್ಮೊಂದಿಗೆ ಬರಲಿದ್ದಾರೆ. ಎಷ್ಟು ಜನ ಬರುತ್ತಾರೆ ಎನ್ನುವುದನ್ನು ಕಾದು ನೋಡಿ’ ಎಂದು ಹೇಳಿದ್ದಾರೆ. 

ಇದನ್ನೂ ಓದಿ... ಬಿಜೆಪಿಗೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ: ಡಿ.ಕೆ ಶಿವಕುಮಾರ್ ಆರೋಪ

.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News