×
Ad

ಕಣಚೂರು: ಮೇ 28ರಂದು ಪದವಿ ಪ್ರದಾನ

Update: 2022-05-26 22:31 IST

ಮಂಗಳೂರು : ನಗರದ ಹೊರ ವಲಯದ ನಾಟೆಕಲ್‌ನಲ್ಲಿರುವ ಕಣಚೂರು ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ ಎಂಬಿಬಿಎಸ್, ಫಿಸಿಯೋಥೆರಪಿ, ನರ್ಸಿಂಗ್ ಮತ್ತು ಅರೆ ವೈದ್ಯಕೀಯ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿದವರಿಗೆ ಪದವಿ ಪ್ರದಾನ ಮೇ 28ರಂದು ನಡೆಯಲಿದೆ.

ಬೆಳಗ್ಗೆ 10.30ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಉದ್ಘಾಟಿಸುವರು. ಮಾಜಿ ಕುಲಪತಿ ಡಾ.ಕೆ.ಎಸ್.ಶ್ರೀಪ್ರಕಾಶ್ ಘಟಿಕೋತ್ಸವ ಭಾಷಣ ಮಾಡುವರು. ಇಂಡಿಯನ್ ಅಸೋಸಿಯೇಶನ್ ಆಫ್ ಫಿಸಿಯೋಥೆರಪಿಯ ಅಧ್ಯಕ್ಷ ಡಾ.ಯು.ಟಿ.ಇಫ್ತಿಕರ್ ಅಲಿ ಭಾಗವಹಿಸುವರು ಎಂದು ಆಸ್ಪತ್ರೆಯ ಮುಖ್ಯ ಆಡಳಿತಾಧಿಕಾರಿ ಡಾ.ರೋಹನ್ ಮೊನೆಸ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಂಜೆ ೫.೩೦ಕ್ಕೆ ಎಂಬಿಬಿಎಸ್ ಪದವಿ ಪ್ರದಾನ ನಡೆಯಲಿದೆ. ಆರೋಗ್ಯ ಸಚಿವ ಡಾ.ಜೆ.ಸುಧಾಕರ್ ಉದ್ಘಾಟಿಸುವರು. ಶಾಸಕ ಯು.ಟಿ.ಖಾದರ್, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ಕೇಂದ್ರದ  ಡಾ.ಎಸ್. ಸಚ್ಚಿದಾನಂದ, ಹಾಜಿ ಅಬ್ದುಲ್ ಅಝೀಜ್ ಅತಿಥಿಗಳಾಗಿರುವರು.

ವೈದ್ಯಕೀಯ ಅಧೀಕ್ಷಕ ಹರೀಶ್ ಶೆಟ್ಟಿ, ನಸಿಂಗ್ ಕಾಲೇಜು ಪ್ರಾಂಶುಪಾಲೆ ಪ್ರೊ.ಮೋಲಿ ಸಲ್ದಾನಾ, ಡೀನ್ ಡಾ.ಮೊಹಮ್ಮದ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News