ಪಣಂಬೂರು ಬೀಚ್ ನಲ್ಲಿ ರಾಷ್ಟ್ರೀಯ ಸರ್ಫಿಂಗ್ ಚಾಂಪಿಯನ್ ಶಿಪ್ ಗೆ ಚಾಲನೆ
Update: 2022-05-27 08:42 IST
ಮಂಗಳೂರು : ಪಣಂಬೂರು ಕಡಲ ತೀರದಲ್ಲಿ ಆಯೋಜಿಸಲಾಗಿರುವ ರಾಷ್ಟ್ರೀಯ ಸರ್ಫಿಂಗ್ ಚಾಂಪಿಯನ್ ಶಿಪ್ ಗೆ ಶುಕ್ರವಾರ ಬೆಳಗ್ಗೆ ಚಾಲನೆ ನೀಡಲಾಯಿತು.
ಎನ್ಎಂಪಿಟಿ ಅಧ್ಯಕ್ಷ ಎವಿ ರಮಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸರ್ಫಿಂಗ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ದ.ಕ. ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಪ್ರಾಯೋಜಕತ್ವದಲ್ಲಿ ನಗರದ ಪಣಂಬೂರು ಕಡಲ ತೀರದಲ್ಲಿ ರಾಷ್ಟ್ರೀಯ ಸರ್ಫಿಂಗ್ ಚಾಂಪಿಯನ್ ಶಿಪ್ ಆಯೋಜಿಸಲಾಗಿದೆ.
ಈ ಸಂಧರ್ಭದಲ್ಲಿ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಮಾಣಿಕ್ಯ ಹಾಗು ಇತರರು ಉಪಸ್ಥಿತರಿದ್ದರು.