×
Ad

ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್, ಇತರ 5 ಮಂದಿಗೆ ಕ್ಲೀನ್ ಚಿಟ್ ನೀಡಿದ ಎನ್‌ಸಿಬಿ

Update: 2022-05-27 13:31 IST
Image Source : INSTAGRAM/GAURI KHAN

ಹೊಸದಿಲ್ಲಿ: ಡ್ರಗ್ಸ್ ಆನ್ ಕ್ರೂಸ್ ಪ್ರಕರಣದಲ್ಲಿ ಬಾಲಿವುಡ್ ಸ್ಟಾರ್ ಶಾರುಕ್  ಖಾನ್ ಅವರ ಪುತ್ರ ಆರ್ಯನ್ ಖಾನ್ ಹಾಗೂ  ಇತರ ಐವರಿಗೆ ಮಾದಕ ದ್ರವ್ಯ ನಿಯಂತ್ರಣ ಘಟಕ (ಎನ್‌ಸಿಬಿ) ಶುಕ್ರವಾರ  ಕ್ಲೀನ್ ಚಿಟ್ ನೀಡಿದೆ ಎಂದು NDTV ವರದಿ ಮಾಡಿದೆ.

ಕಳೆದ ವರ್ಷ ಮುಂಬೈನ ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ಪತ್ತೆಯಾದ ನಂತರ ಡ್ರಗ್ಸ್ ವಿರೋಧಿ ಸಂಸ್ಥೆ ಎನ್‌ಸಿಬಿ 14 ಆರೋಪಿಗಳನ್ನು ಹೆಸರಿಸಿ 6,000 ಪುಟಗಳ ಆರೋಪಪಟ್ಟಿ ಸಲ್ಲಿಸಿತ್ತು.

ದಾಳಿಯ ನಂತರ ಬಂಧಿತರಾಗಿರುವ ಆರ್ಯನ್ ಖಾನ್ ಅವರನ್ನು ಆರೋಪಿ ಎಂದು ಹೆಸರಿಸಲಾಗಿಲ್ಲ.

ಆರ್ಯನ್  ವಿರುದ್ಧ ಯಾವುದೇ ಪುರಾವೆಗಳು ಪತ್ತೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಆರ್ಯನ್ ಖಾನ್ ಬಳಿ  ಯಾವುದೇ ಡ್ರಗ್ಸ್ ಪತ್ತೆಯಾಗಿಲ್ಲ ಎಂದು ಎನ್ ಸಿಬಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News