×
Ad

ಶಿಲ್ಪಾ ಆತ್ಮಹತ್ಯೆ ಪ್ರಕರಣ: ಸಿಐಡಿ ತನಿಖೆಗೆ ಆಗ್ರಹ

Update: 2022-05-27 19:10 IST

ಉಡುಪಿ : ಕುಂದಾಪುರ ತಾಲೂಕಿನ ಉಪ್ಪಿನಕುದ್ರು ಗ್ರಾಮದ ಶಿಲ್ಪಾ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕು ಎಂದು ವಿಶ್ವ ಹಿಂದು ಪರಿಷತ್ ಬಜರಂಗದಳ ಉಡುಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಸರಕಾರವನ್ನು ಒತ್ತಾಯಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಲ್ಪ ಆತ್ಮಹತ್ಯೆಗೆ ಕಾರಣರಾದ ದಂಪತಿಯನ್ನು ಕೂಡಲೇ ಬಂಧಿಸಬೇಕು. ಇಲ್ಲದಿದ್ದರೆ ಮೇ ೩೦ರಂದು ಮಧ್ಯಾಹ್ನ ೩ಗಂಟೆಗೆ ಕುಂದಾಪುರ ಶಾಸ್ತ್ರಿ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.

ನಿರಂತರವಾಗಿ ಕರಾವಳಿ ಭಾಗದಲ್ಲಿ ವ್ಯವಸ್ಥಿತ ಲವ್ ಜಿಹಾದ್ ಷಡ್ಯಂತ್ರ ನಡೆಯುತ್ತಿದ್ದು, ಈ ಬಗ್ಗೆ ಸರಕಾರ ತಕ್ಷಣ ಲವ್ ಜಿಹಾದ್ ತಡೆಗೆ ಕಾನೂನು ತರಬೇಕು. ಶಿಲ್ಪಾ ಕುಟುಂಬಕ್ಕೆ ಸರಕಾರ ೧೦ಲಕ್ಷ ರೂ. ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ದಕ್ಷಿಣ ಪ್ರಾಂತ ಸಂಚಾಲಕ ಸುನೀಲ್ ಕೆ.ಆರ್., ಜಿಲ್ಲಾ ಉಪಾಧ್ಯಕ್ಷ ಶ್ರೀಧರ್ ಬಿಜೂರು, ಗಿರೀಶ್ ಕುಂದಾಪುರ, ಪ್ರದೀಪ್ ಮಾರ್ಕೋಡು, ಪೂರ್ಣಿಮಾ ಸುರೇಶ್ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News