ಕುವೆಂಪು ಕುರಿತು ಅವಹೇಳನಕಾರಿ ಬರಹ; ರೋಹಿತ್ ಚಕ್ರತೀರ್ಥ ವಿರುದ್ಧ ಮತ್ತೊಂದು ದೂರು

Update: 2022-05-27 15:32 GMT
ರೋಹಿತ್ ಚಕ್ರತೀರ್ಥ

ಬೆಂಗಳೂರು, ಮೇ 27: ರಾಷ್ಟ್ರಕವಿ ಕುವೆಂಪು ಅವರ ನಾಡಗೀತೆಯನ್ನು ಅನುಮಾನಿಸಿರುವ ಆರೋಪದಡಿ ಪಠ್ಯಪುಸ್ತಕ ಮರು ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅಲೆಮಾರಿ ಬುಡಕಟ್ಟು ಮಹಾಸಭಾ ದೂರು ಸಲ್ಲಿಸಿದೆ.

ಶುಕ್ರವಾರ ನಗರದ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರಿಗೆ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಎಸ್.ಸಿ.ನಾಗರಾಜ್ ದೂರು ಸಲ್ಲಿಸಿದ್ದು, ರೋಹಿತ್ ಚಕ್ರತೀರ್ಥ ಕುವೆಂಪು ಅವರ ಬಗ್ಗೆ ಅವಹೇಳನಕಾರಿಯಾಗಿ ಬರೆದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರು. ಅಲ್ಲದೆ ನಾಡಗೀತೆಗೂ ಅಪಮಾನ ಮಾಡಿದ್ದಾರೆ. ಕುವೆಂಪು ಬಗ್ಗೆ ಕೆಟ್ಟ ಪದಗಳಿಂದ ನಿಂದನೆ ಮಾಡಿದ್ದಾರೆ. ಇವರ ವಿರುದ್ಧ ಸಮಾಜ ಸ್ವಾಸ್ಥ್ಯ ಕದಡುವ ಪ್ರಕರಣದ ಅಡಿಯಲ್ಲಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News