ಸಮಗ್ರ ಶಿಶು ಅಭಿವೃದ್ಧಿ ಯೋಜನೆಯನ್ನು ಶೀಘ್ರವೇ ಜಾರಿಗೆ ತನ್ನಿ: ಹೈಕೋರ್ಟ್

Update: 2022-05-27 17:01 GMT

ಬೆಂಗಳೂರು, ಮೇ 27: ಕೇಂದ್ರ ಸರಕಾರದ ನಿಯಮಗಳು ಮತ್ತು ತಾಂತ್ರಿಕ ಸಮಿತಿ ಸಲ್ಲಿಸಿದ ವರದಿಯನ್ನು ಗಮನದಲ್ಲಿಟ್ಟುಕೊಂಡು ಯಾವುದೇ ವಿಳಂಬ ಮಾಡದೇ ಸಮಗ್ರ ಶಿಶು ಅಭಿವೃದ್ಧಿ ಯೋಜನೆ(ಐಸಿಡಿಎಸ್)ಯನ್ನು ತಕ್ಷಣವೇ ಜಾರಿಗೆ ತರಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ. 

ಈ ಕುರಿತಂತೆ ಬಾಗಲಕೋಟೆಯ ಅಮರಾವತಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಂಗೀತಾ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ನಿರ್ದೇಶನ ನೀಡಿದೆ. 

ಸುಪ್ರೀಂಕೋರ್ಟ್ ಆದೇಶದ ಅನುಸಾರ ಐಸಿಡಿಎಸ್ ಯೋಜನೆ ಜಾರಿಗೆ ಸಂಬಂಧಿಸಿದಂತೆ, ಮಹಿಳೆಯರಿಗೆ ಪೂರಕವಾಗುವ ಪೌಷ್ಟಿಕ ಆಹಾರ ಉತ್ಪಾದನೆ ಹಾಗೂ ತರಬೇತಿ ಕೇಂದ್ರ ರಚಿಸಲಾಗಿದೆ. ಆದರೆ, ಈ ಎಂಎಸ್‍ಪಿಟಿಸಿಗಳು ಫಲಾನುಭವಿಗಳಿಗೆ ಪೂರೈಸುವ ಆಹಾರ ಪದಾರ್ಥಗಳಲ್ಲಿ ಗುಣಮಟ್ಟವಿಲ್ಲ. ಅಂಗನವಾಡಿ ಕೇಂದ್ರಗಳಲ್ಲಿ ಫಲಾನುಭವಿಗಳಿಗೆ ವಿತರಿಸುವ ಆಹಾರದ ಗುಣಮಟ್ಟ ಖಾತರಿಪಡಿಸುವಂತೆ ಪೂರಕ ಪೌಷ್ಟಿಕಾಂಶ ಕಾರ್ಯಕ್ರಮದ ಅಡಿ ಪರವಾನಿಗೆ ಹೊಂದಿರುವ ಮಹಿಳಾ ಗುಂಪುಗಳಿಗೆ ಸೂಚಿಸಲಾಗಿದೆ. ಆದರೆ, ಸರಕಾರ ಈ ಆದೇಶವನ್ನು 2021ರ ಮೇ 15ರಂದು ಯಾವುದೇ ಕಾರಣ ನೀಡದೆ ಹಿಂಪಡೆದಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.   

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News