ಅಕ್ರಮ ಆಸ್ತಿ ಪ್ರಕರಣ: ಮಾಜಿ ಸಿಎಂ ಓಂ ಪ್ರಕಾಶ್ ಚೌಟಾಲಗೆ 4 ವರ್ಷ ಜೈಲು‌

Update: 2022-05-27 17:31 GMT

ಹೊಸದಿಲ್ಲಿ, ಮೇ 27: ಅಕ್ರಮ ಆಸ್ತಿ ಹೊಂದಿದ ಪ್ರಕರಣದಲ್ಲಿ ಹರ್ಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲ ಅವರಿಗೆ ದಿಲ್ಲಿ ನ್ಯಾಯಾಲಯ ಶುಕ್ರವಾರ ನಾಲ್ಕು ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 

1993ರಿಂದ 2006ರ ವರೆಗೆ ಅಕ್ರಮ ಆಸ್ತಿ ಹೊಂದಿದ ಪ್ರಕರಣದಲ್ಲಿ ಚೌಟಾಲ ಅವರಿಗೆ ವಿಶೇಷ ನ್ಯಾಯಾಧೀಶ ವಿಕಾಸ್ ಧಲ್ 50 ಲಕ್ಷ ರೂಪಾಯಿ ದಂಡ ಕೂಡ ವಿಧಿಸಿದ್ದಾರೆ. ಚೌಟಾಲ ಅವರ ನಾಲ್ಕು ಸೊತ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ನ್ಯಾಯಾಧೀಶರು ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ನ್ಯಾಯಾಲಯ ಕಳೆದ ವಾರ ಚೌಟಾಲ ಅವರನ್ನು ದೋಷಿ ಎಂದು ಪರಿಗಣಿಸಿತ್ತು. ಸಿಬಿಐ ಚೌಟಾಲ ವಿರುದ್ಧ 2005ರಲ್ಲಿ ಪ್ರಕರಣ ದಾಖಲಿಸಿತ್ತು. 2010 ಮಾರ್ಚ್ 26ರಂದು ಆರೋಪ ಪಟ್ಟಿ ಸಲ್ಲಿಸಿತ್ತು. 1993 ಹಾಗೂ 2006ರ ನಡುವೆ ಅವರು ಅಕ್ರಮ ಆಸ್ತಿ ಹೊಂದಿದ್ದಾರೆ ಎಂದು ಆರೋಪಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News