ಉತ್ತರಾಖಂಡ: ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಸಮಿತಿ ರಚನೆ

Update: 2022-05-28 12:16 GMT
Uttarakhand Chief Minister Pushkar Singh Dhami. | Pushkar Singh Dhami/ Facebook

ಡೆಹ್ರಾಡೂನ್: ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಉತ್ತರಾಖಂಡ ಸರ್ಕಾರ ಶುಕ್ರವಾರ ಐದು ಸದಸ್ಯರ ಸಮಿತಿಯನ್ನು ರಚಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಏಕರೂಪ ನಾಗರಿಕ ಸಂಹಿತೆಯು ವಿವಿಧ ನಂಬಿಕೆಗಳ ಜನರಿಗೆ ವಿಭಿನ್ನ ವೈಯಕ್ತಿಕ ಕಾನೂನುಗಳನ್ನು ಅನುಮತಿಸುವ ಬದಲು ಎಲ್ಲಾ ಭಾರತೀಯರಿಗೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ದತ್ತುಗಳನ್ನು ನಿಯಂತ್ರಿಸುವ ಏಕರೂಪದ ಕಾನೂನುಗಳನ್ನು  ಹೇರುತ್ತದೆ. 

ಭಾರತೀಯ ಡಿಲಿಮಿಟೇಶನ್ ಆಯೋಗದ ಅಧ್ಯಕ್ಷರೂ ಆಗಿರುವ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ರಂಜನಾ ದೇಸಾಯಿ ಅವರು ಸಮಿತಿಯ ನೇತೃತ್ವ ವಹಿಸಲಿದ್ದಾರೆ ಎಂದು TheNewIndianExpress ವರದಿ ಮಾಡಿದೆ. 

ದೆಹಲಿ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಪ್ರಮೋದ್ ಕೊಹ್ಲಿ, ಸಾಮಾಜಿಕ ಕಾರ್ಯಕರ್ತ ಮನು ಗೌರ್, ನಿವೃತ್ತ ಐಎಎಸ್ ಅಧಿಕಾರಿ ಶತ್ರುಘ್ನ ಸಿಂಗ್ ಮತ್ತು ಡೂನ್ ವಿಶ್ವವಿದ್ಯಾಲಯದ ಉಪಕುಲಪತಿ ಸುರೇಖಾ ದಂಗ್ವಾಲ್ ಸಮಿತಿಯ ಇತರ ಸದಸ್ಯರಾಗಿರಲಿದ್ದಾರೆ.

"ಉತ್ತರಾಖಂಡದಲ್ಲಿ ವಾಸಿಸುವ ಜನರ ವೈಯಕ್ತಿಕ ವಿಷಯಗಳನ್ನು ನಿಯಂತ್ರಿಸುವ ಎಲ್ಲಾ ಸಂಬಂಧಿತ ಕಾನೂನುಗಳನ್ನು ಪರಿಶೀಲಿಸಲು ಮತ್ತು ಪ್ರಸ್ತುತ ಕಾನೂನುಗಳಲ್ಲಿ ತಿದ್ದುಪಡಿಗಳ ಕುರಿತು ವರದಿಯನ್ನು ತಯಾರಿಸಲು ತಜ್ಞರ ಸಮಿತಿಯನ್ನು ಸ್ಥಾಪಿಸಲು ರಾಜ್ಯಪಾಲರು ಅನುಮತಿ ನೀಡಿದ್ದಾರೆ" ಎಂದು ರಾಜ್ಯ ಗೃಹ ಇಲಾಖೆ ಹೊರಡಿಸಿದ ಆದೇಶದಲ್ಲಿ ತಿಳಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರುವುದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಅಜೆಂಡಾದ ಭಾಗವಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News