ಗಂಗೊಳ್ಳಿ ಪೊಲೀಸರ ಕಾನೂನು ಬಾಹಿರ ವರ್ತನೆ ಆರೋಪ; ಡಿವೈಎಸ್ಪಿಗೆ ದೂರು

Update: 2022-05-28 16:09 GMT

ಕುಂದಾಪುರ, ಮೇ 28: ಜಾಗದ ತಕರಾರಿನ ವಿಚಾರಕ್ಕೆ ಸಂಬಂಧಿಸಿ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರು ಪ್ರತಿದೂರಿನಲ್ಲಿ ಗಂಗೊಳ್ಳಿ ಪೊಲೀಸರು ಬಿಜೆಪಿಯವರ ರಾಜಕೀಯ ಒತ್ತಡದಿಂದ ಕಾನೂನು ಬಾಹಿರವಾಗಿ ವರ್ತಿಸಿದ್ದಾರೆಂದು ಕಾಂಗ್ರೆಸ್ ನಿಯೋಗ ಆರೋಪಿಸಿದೆ.

ಈ ಬಗ್ಗೆ ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಅವರಿಗೆ ಶನಿವಾರ ಮನವಿ ಸಲ್ಲಿಸಿದ ನಿಯೋಗ, ಬಿಜೆಪಿ ಪಕ್ಷದ ಒತ್ತಡದಿಂದಾಗಿ ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯ ಸೀತಾರಾಮ ಗಾಣಿಗ ಅವರ ಮೇಲೆ ಸುಳ್ಳು ಗಂಭೀರ ಪ್ರಕರಣ ದಾಖಲಿಸಿ, ಬಂಧಿಸಿದಲ್ಲದೆ ಠಾಣೆಯಲ್ಲಿ ಕೋಳ ಹಾಕುವ ತನಕ ಹೋಗಿ ಕೆಟ್ಟದಾಗಿ ನಡೆಸಿಕೊಂಡಿದ್ದಾರೆ ಎಂದು ದೂರಿದರು.

ಪ್ರತಿದೂರಿನ ಪ್ರಕರಣದ ಆರೋಪಿಗಳನ್ನು ರಾಜಕೀಯ ಒತ್ತಡದಿಂದ ಬಂಧಿಸದೇ ಗಂಗೊಳ್ಳಿ ಪೊಲೀಸರು ಕಾನೂನು ಬಾಹಿರವಾಗಿ ವರ್ತಿಸಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ, ನ್ಯಾಯ ಒದಗಿಸಿಕೊಡದಿದ್ದಲ್ಲಿ, ಠಾಣೆಯೆದುರೇ ಪ್ರತಿಭಟನೆ ನಡೆಸಲಾಗುವುದು ಎಂದು ನಿಯೋಗ ಎಚ್ಚರಿಕೆ ನೀಡಿದೆ. ಮನವಿ ಆಲಿಸಿದ ಡಿವೈಎಸ್ಪಿ, ಈ ಬಗ್ಗೆ ಪರಿಶೀಲನೆ ನಡೆಸುವ ಭರವಸೆ ನೀಡಿದರು.

ನಿಯೋಗದಲ್ಲಿ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ, ಗುಜ್ಜಾಡಿ ಗ್ರಾಪಂ ಅಧ್ಯಕ್ಷೆ ಯಮುನಾ ಪೂಜಾರಿ, ಉಪಾಧ್ಯಕ್ಷ ರಾಜು ಪೂಜಾರಿ, ಸದಸ್ಯರಾದ ಭಾರತಿ, ಲೋಲಾಕ್ಷಿ ಪಂಡಿತ್, ಕಾಂಗ್ರೆಸ್ ಮುಖಂಡರಾದ ಪ್ರಸನ್ನ ಕುಮಾರ್ ಶೆಟ್ಟಿ, ಉದಯಕುಮಾರ್ ಶೆಟ್ಟಿ, ವಿಕಾಸ್ ಹೆಗ್ಡೆ, ಸದಾಶಿವ ಶೆಟ್ಟಿ, ಶೇಖರ್ ಬಳೆಗಾರ್, ರವಿ ಪೂಜಾರಿ, ಚಂದ್ರಶೇಖರ್ ಅರಾಟೆ, ಜಗನ್ನಾಥ್ ಬಿಲ್ಲವ, ಯೂತ್ ಕಾಂಗ್ರೆಸ್ ಅಧ್ಯಕ್ಷ ಹರ್ಷ ಶೆಟ್ಟಿ, ಕಾಳಿಂಗ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಮಹಾಲಿಂಗ ಪೂಜಾರಿ ಮೊದಲಾದವರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News