ಭಟ್ಕಳ: ಮಗುಚಿ ಬಿದ್ದ ಲಾರಿ; ಇಬ್ಬರಿಗೆ ಗಾಯ

Update: 2022-05-28 17:15 GMT

ಭಟ್ಕಳ: ನಗರದ ರಾಷ್ಟ್ರೀಯ ಹೆದ್ದಾರಿ ಲಾರಿಯೊಂದು ಮಗುಚಿ ಬಿದ್ದ ಪರಿಣಾಮ ಚಾಲಕ ಗಾಯಗೊಂಡ ಘಟನೆ ನಡೆದಿದೆ. ಮಂಗಳೂರು ಕಡೆಯಿಂದ ಹೊನ್ನಾವರ ಕಡೆಗೆ ಹೋಗುತ್ತಿದ್ದ ಲಾರಿಯು ಸರ್ಪನಕಟ್ಟೆಯ ಬಳಿಯಲ್ಲಿ ಪೊಲೀಸ್ ಚೆಕ್‍ಪೋಸ್ಟ್ ಸಮೀಪ ತಲುಪುತ್ತಿದ್ದಂತೆಯೇ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿತ್ತೆನ್ನಲಾಗಿದೆ.

ಲಾರಿಯ ಚಾಲಕನಿಗೆ ಗಂಭೀರ ಗಾಯಗಳಾಗಿದ್ದರೆ, ಸಹಾಯಕನಿಗೆ ಸಣ್ಣಪುಟ್ಟ ಗಾಯಳಾಗಿದೆ. ತಕ್ಷಣ ಅವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಲಾರಿಯಲ್ಲಿದ್ದ ಕಟ್ಟಿಗೆಯು ರಸ್ತೆಯ ಮೇಲೆಯೇ ಬಿದ್ದಿದ್ದರಿಂದ ಸ್ವಲ್ಪ ಕಾಲ ಸಂಚಾರಕ್ಕೆ ವ್ಯತ್ಯಯವಾಯಿತು. ನಗರ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News