×
Ad

ಬೆಂಗಳೂರು: ಹಜ್‍ಯಾತ್ರೆ-2022’ ಎರಡು ದಿನಗಳ ತರಬೇತಿ ಶಿಬಿರಕ್ಕೆ ಚಾಲನೆ

Update: 2022-05-28 23:17 IST

ಬೆಂಗಳೂರು, ಮೇ 28: 2022ನೆ ಸಾಲಿನ ಪವಿತ್ರ ಹಜ್ ಯಾತ್ರೆಗೆ ಆಯ್ಕೆಯಾಗಿರುವ ಯಾತ್ರಿಗಳಿಗಾಗಿ ಹೆಗಡೆ ನಗರ ಸಮೀಪದ ತಿರುಮೇನಹಳ್ಳಿಯಲ್ಲಿರುವ ಹಜ್ ಭವನದಲ್ಲಿ ಎರಡು ದಿನಗಳ ತರಬೇತಿ ಶಿಬಿರವನ್ನು ಶನಿವಾರ ಉದ್ಘಾಟಿಸಲಾಯಿತು. 

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಹಾಗೂ ತುಮಕೂರು ಜಿಲ್ಲೆಯ ಯಾತ್ರಿಗಳಿಗೆ ಶನಿವಾರ ಹಾಗೂ ರವಿವಾರ ಹಜ್‍ಯಾತ್ರೆಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗುವುದು.

ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ರಾಜ್ಯಸಭಾ ಸದಸ್ಯ ಡಾ.ಸೈಯ್ಯದ್ ನಾಸಿರ್ ಹುಸೇನ್, ರಾಜ್ಯ ಹಜ್ ಸಮಿತಿ ಅಧ್ಯಕ್ಷ ರವೂಫುದ್ದೀನ್ ಕಚೇರಿವಾಲ, ಮೌಲಾನ ಮಕ್ಸೂದ್ ಇಮ್ರಾನ್ ರಶಾದಿ, ಹಜ್ ಸಮಿತಿಯ ನೋಡಲ್ ಅಧಿಕಾರಿ ಸೈಯ್ಯದ್ ಏಜಾಝ್ ಅಹ್ಮದ್, ಕಾರ್ಯನಿರ್ವಾಹಕ ಅಧಿಕಾರಿ ಸರ್ಫರಾಝ್ ಖಾನ್, ಬಿಜೆಪಿ ಮುಖಂಡರಾದ ಮುಹಮ್ಮದ್ ಕಬೀರ್ ಅಹ್ಮದ್, ಖಸ್ರೋ ಖುರೇಷಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News