ಮಂಗಳೂರು; ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ಮಾಟ್೯ ಸಿಟಿ ಕಾಮಗಾರಿ ಪರಿಶೀಲನೆ
Update: 2022-05-29 09:20 IST
ಮಂಗಳೂರು : ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ರವಿವಾರ ಬೆಳಗ್ಗೆ ಮಂಗಳೂರು ಸ್ಮಾಟ್೯ ಸಿಟಿ ವತಿಯಿಂದ ಕೈಗೊಳ್ಳಲಾದ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಈ ಸಂದರ್ಭ ಶಾಸಕರಾದ ವೇದವ್ಯಾಸ ಕಾಮತ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಸ್ಮಾರ್ಟ್ ಸಿಟಿ ಎಂಡಿ ಮಹೇಂದ್ರ ಮಿಶ್ರ, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಸ್ಮಾರ್ಟ್ ಸಿಟಿ ಅಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.