ಉಳ್ಳಾಲ: ಮೈಸೂರು ಮೂಲದ ಮಹಿಳೆ ಸಮುದ್ರಪಾಲು
ಉಳ್ಳಾಲ : ವಿಹಾರಕ್ಕೆಂದು ಕುಟುಂಬದೊಂದಿಗೆ ಉಳ್ಳಾಲದ ಸಮ್ಮರ್ ಸ್ಯಾಂಡ್ಸ್ ಬೀಚ್ ರೆಸಾರ್ಟ್ ಗೆ ಬಂದಿದ್ದ ಮೈಸೂರು ಮೂಲದ ಮಹಿಳೆಯೊಬ್ಬರು ಸಮುದ್ರ ಪಾಲಾದ ಘಟನೆ ಉಳ್ಳಾಲದಲ್ಲಿ ನಡೆದಿದೆ.
ಮೃತರನ್ನು ಮೈಸೂರು ನಿವಾಸಿ ಭಾಗ್ಯಲಕ್ಷ್ಮಿ ಎಂದು ಗುರುತಿಸಲಾಗಿದೆ.
ಭಾಗ್ಯಲಕ್ಷ್ಮಿ ಅವರು ಪತಿ, ಮೂವರು ಪುತ್ರಿಯರು ಹಾಗೂ ಮೊಮ್ಮಗಳೊಂದಿಗೆ ಮೈಸೂರಿನಿಂದ ಮಂಗಳೂರಿಗೆ ಪ್ರವಾಸಕ್ಕೆಂದು ಬಂದಿದ್ದರು. ಪಂಪ್‌ವೆಲ್ ಬಳಿ ರೂಂನಲ್ಲಿ ತಂಗಿದ್ದ ಕುಟುಂಬ ಶನಿವಾರ ಬೆಳಗ್ಗೆ ಸೋಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಉಳ್ಳಾಲ ಸಮ್ಮರ್ ಸ್ಯಾಂಡ್ಸ್ ಬೀಚ್ ರೆಸಾರ್ಟ್ ಗೆ ವಿಹಾರಕ್ಕೆಂದು ತೆರಳಿದ್ದರು.
ಭಾಗ್ಯಲಕ್ಷ್ಮಿ ಅವರ ಪತಿ ಮತ್ತು ಮಗು ಭಾರೀ ಅಲೆಗಳ ನಡುವೆ ಸಿಲುಕಿದ್ದು, ಅವರನ್ನ ರಕ್ಷಿಸಲು ಭಾಗ್ಯಲಕ್ಷ್ಮಿ ಸಮುದ್ರಕ್ಕಿಳಿದಿದ್ದರು. ಈ ವೇಳೆ ಭಾಗ್ಯಲಕ್ಷ್ಮಿ ಅವರೇ ಅಲೆಗೆ ಸಿಲುಕಿ ಸಮುದ್ರ ಪಾಲಾಗಿದ್ದಾರೆ ಎಂದು ಸ್ಥಳಕ್ಕಾಗಮಿಸಿದ ಮೀನುಗಾರರು ತಿಳಿಸಿದ್ದಾರೆ.
ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.