×
Ad

ಕೋಡಿ ಬ್ಯಾರೀಸ್‌ನಲ್ಲಿ ಮಣ್ಣು ಉಳಿಸಿ ಅಭಿಯಾನ

Update: 2022-05-29 19:00 IST

ಕುಂದಾಪುರ : ಕೋಡಿ ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ ಮತ್ತು ಹಾಜಿ.ಕೆ.ಮೊಹಿದ್ದಿನ್ ಬ್ಯಾರಿ ಸ್ಮಾರಕ ಅನುದಾನಿತ ಪ್ರೌಢಶಾಲೆಯ ಜಂಟಿ ಆಶ್ರಯದಲ್ಲಿ ಪ್ರಧಾನ ಮಂತ್ರಿಯವರಿಗೆ ಪತ್ರವನ್ನು ಬರೆಯುವ ಸದ್ಗುರು ಅವರ ಮಣ್ಣು ಉಳಿಸಿ ಅಭಿಯಾನ ಕಾರ್ಯಕ್ರಮವು ಶನಿವಾರ ಜರಗಿತು.

ಈಶ ಫೌಂಡೇಶನ್ ಸಂಸ್ಥೆಯ ಸ್ವಯಂ ಸೇವಕರಾದ ವಿಶಾಲ, ಪ್ರಖ್ಯಾತ್ ಮತ್ತು ನೇಹಾ ಕಾರ್ಯಕ್ರಮವನ್ನು ನಡೆಸಿಕೊಟ್ಟು ವಿದ್ಯಾರ್ಥಿಗಳಲ್ಲಿ ಮಣ್ಣಿನ ಸಂರಕ್ಷಣೆಯ ಬಗ್ಗೆ ಜಾಗೃತಿಯನ್ನು ಮೂಡಿಸಿದರು.

ಬ್ಯಾರೀಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಅಬ್ದುಲ್ ರೆಹಮಾನ್ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಗಳ ಆಡಳಿತ ನಿರ್ದೇಶಕ ದೋಮ ಚಂದ್ರಶೇಖರ್ ಮಾತನಾಡಿದರು.

ಬ್ಯಾರೀಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಸಲಹೆಗಾರ ಹಾಜಿ ಅಬುಶೇಕ್, ಪ್ರಾಂಶುಪಾಲೆ ಅಶ್ವಿನಿ ಶೆಟ್ಟಿ, ಹಾಜಿ.ಕೆ.ಮೊಹಿದ್ದಿನ್ ಬ್ಯಾರಿ ಸ್ಮಾರಕ ಅನುದಾನಿತ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಜಯಂತಿ ಉಪಸ್ಥಿತರಿದ್ದರು. ಸಹ ಶಿಕ್ಷಕಿ ಮಹಿಮಾ ಕಾರ್ಯಕ್ರಮ ನಿರ್ವಹಿಸಿದರು. ಸಹ ಶಿಕ್ಷಕ ಸಂತೋಷ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News