ರಾಜ್ಯಸಭಾ ಚುನಾವಣೆ: ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್ ಗೆ ಬಿಜೆಪಿ ಟಿಕೆಟ್

Update: 2022-05-29 14:57 GMT

ಬೆಂಗಳೂರು, ಮೇ 29: ಜೂನ್ 10ರಂದು ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್ ಹಾಗೂ ಚಿತ್ರನಟ ಜಗ್ಗೇಶ್ ಅವರನ್ನು ಅಧಿಕೃತ ಅಭ್ಯರ್ಥಿಗಳನ್ನಾಗಿ ಘೋಷಣೆ ಮಾಡಲಾಗಿದೆ.

ಕರ್ನಾಟಕ ರಾಜ್ಯದಿಂದ ನಿರ್ಮಲಾ ಸೀತಾರಾಮನ್ ಅವರಿಗೆ ಮತ್ತೊಮ್ಮೆ ಹಾಗೂ ನಟ ಜಗ್ಗೇಶ್ ಅವರಿಗೆ ರಾಜ್ಯಸಭೆ ಟಿಕೆಟ್ ನೀಡಲಾಗಿದೆ. ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಹೈಕಮಾಂಡ್‌ನಿಂದ ಇಬ್ಬರು ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪಕ್ಷ ಮತ್ತೊಮ್ಮೆ ಅವಕಾಶ ನೀಡಿದೆ. ಇದೇ ಸಂದರ್ಭದಲ್ಲಿ ಚಿತ್ರನಟ ಜಗ್ಗೇಶ್ ಅವರಿಗೂ ರಾಜ್ಯಸಭೆ ಟಿಕೆಟ್ ಸಿಕ್ಕಿದೆ. ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಇದೇ ತಿಂಗಳ 31ಕ್ಕೆ ಕೊನೆಯದಿನವಾಗಿದ್ದು, ಜೂನ್ 1ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದೆ.

ಜೂನ್ 3ಕ್ಕೆ ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನ. ಜೂನ್ 10ರ ಬೆಳಗ್ಗೆ 9ರಿಂದ ಸಂಜೆ 4 ಗಂಟೆಯ ವರೆಗೆ ವಿಧಾನಸಭಾ ಸದಸ್ಯರು(ಶಾಸಕರು) ಮತದಾನ ಮಾಡಲಿದೆ. ಅಂದು ಸಂಜೆ 5ಗಂಟೆಗೆ ಮತ ಎಣಿಕೆ ಕಾರ್ಯ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News