×
Ad

‘ಮಟ್ಟಿ ಮುರಳೀಧರ ರಾವ್’, ‘ಪೆರ್ಲ ಕೃಷ್ಣ ಭಟ್’ ಪ್ರಶಸ್ತಿ ಪ್ರದಾನ

Update: 2022-05-29 20:43 IST

ಉಡುಪಿ : ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ ಉಡುಪಿ ಯಕ್ಷಗಾನ ಕಲಾರಂಗದ ವತಿಯಿಂದ ರವಿವಾರ ಕೃಷ್ಣಮಠದ ರಾಜಾಂಗಣದಲ್ಲಿ ನಡೆದ ತಾಳಮದ್ದಳೆ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ‘ಮಟ್ಟಿ ಮುರಳೀಧರ ರಾವ್’ ಪ್ರಶಸ್ತಿಯನ್ನು ಮರಣೋತ್ತರವಾಗಿ ಹಿರಿಯ ಅರ್ಥಧಾರಿ ಎಸ್.ಎಂ.ಹೆಗಡೆ ಮುಡಾರೆ ಹಾಗೂ ‘ಪೆರ್ಲ ಕೃಷ್ಣ ಭಟ್’ ಪ್ರಶಸ್ತಿ ಯನ್ನು ಜಾನಪದ ವಿದ್ವಾಂಸ ಅರ್ಥಧಾರಿ ಕೆ.ಎಲ್.ಕುಂಡಂತಾಯ ಅವರಿಗೆ ಪ್ರದಾನ ಮಾಡಿದರು.

ಪ್ರಶಸ್ತಿಯನ್ನು ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾಸಾಗರತೀರ್ಥ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡಿ ದರು. ಮರಣೋತ್ತರ ಪ್ರಶಸ್ತಿಯನ್ನು ಮುಡಾರೆ ಅವರ ಪುತ್ರಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕಲಾಂತರಂಗ ೨೦೨೧-೨೨ನ್ನು ಕರ್ನಾಟಕ ಬ್ಯಾಂಕಿನ ಮಹಾಪ್ರಬಂಧಕ ರಾಜಕುಮಾರ ಪಿ.ಎಚ್. ಬಿಡುಗಡೆ ಗೊಳಿಸಿದರು.

ಹೊನ್ನಾವರದ ಉದ್ಯಮಿ ಕೃಷ್ಣಮೂರ್ತಿ ಭಟ್ ಶಿವಾನಿ ಮುಖ್ಯ ಅತಿಥಿಯಾಗಿದ್ದರು. ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್, ಕಾರ್ಯದರ್ಶಿ ಮುರಳಿ ಕಡೆಕಾರ್, ಎಸ್.ವಿ.ಭಟ್, ನಾರಾಯಣ ಹೆಗಡೆ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News