ಬಹುರಾಷ್ಟ್ರೀಯ ಕಂಪನಿಗಳಿಂದ ಮೂಲ ನೇಕಾರರಿಗೆ ಹೊಡೆತ: ಶಾಸಕ ರಘುಪತಿ ಭಟ್

Update: 2022-05-29 15:18 GMT

ಉಡುಪಿ: ಆಧುನಿಕ ಕಾಲಘಟ್ಟದಲ್ಲಿ ಯಂತ್ರೋಪಕರಣಗಳು ಹಾಗೂ ಬಹುರಾಷ್ಟ್ರೀಯ ಕಂಪನಿಗಳ ಆಗಮನ ದಿಂದ ಮೂಲ ನೇಕಾರರಿಗೆ ಸಮಸ್ಯೆ ಉಂಟಾಗುತ್ತಿದೆ. ಆದುದರಿಂದ ಪ್ರಸ್ತುತ ದಿನಗಳಲ್ಲಿ ಆಧುನಿಕತೆಯನ್ನು ಬಳಸಿಕೊಂಡು ಯುವಕರನ್ನು ಜೊತೆಗೂಡಿಸಿ ಹೊಸತನದೊಂದಿಗೆ ಮುಂದು ವರೆಯಬೇಕಾಗಿದೆ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.

ಉಡುಪಿ ಪದ್ಮಶಾಲಿ ನೇಕಾರ ಪ್ರತಿಷ್ಠಾನದ ಆಶ್ರಯದಲ್ಲಿ ಕಿನ್ನಿಮುಲ್ಕಿ ವೀರಭದ್ರ ಕಲಾಭವನದಲ್ಲಿ ರವಿವಾರ ನಡೆದ ಕೃತಜ್ಞತೆ-ಗೌರವಾರ್ಪಣೆ-ಅಭಿನಂದನೆ- ಪ್ರತಿಭಾ ಪುರಸ್ಕಾರ-ಮಾರ್ಗದರ್ಶನ-ಸಂವಾದ-ಮಾರ್ಗದರ್ಶನ-ಪ್ರತಿಭಾ ಪ್ರದರ್ಶನ ‘ಯಶೋಗಾಥೆಗೊಂದು ಮುನ್ನುಡಿ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಕೈಮಗ್ಗದ ಬಟ್ಟೆಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಇರುವುದರಿಂದ ಆದಷ್ಟು ಆಧುನೀಕರಣಗೊಳಿಸಿ ಮಾರುಕಟ್ಟೆ ಸೃಷ್ಟಿಸುವ ಅವಶ್ಯಕತೆ ಇದೆ. ನೇಕಾರ ಸಮಾಜಕ್ಕೆ ತಮ್ಮ ಕುಲಕಸುಬಿಗೆ ಸರಕಾರದಿಂದ ಬೇಕಾದ ಸಹಕಾರದ ಬಗ್ಗೆ ರೂಪುರೇಷೆಯನ್ನು ತಯಾರಿಸಿ ನೀಡಿದಲ್ಲಿ ಸರಕಾರದ ಮಟ್ಟದಲ್ಲಿ ಬೇಕಾದ ಪ್ರೋತ್ಸಾಹ ಹಾಗೂ ಸಹಕಾರ ನೀಡಲಾಗುವುದು ಎಂದು ಅವರು ಭರವಸೆ ನೀಡಿದರು.

ಅಧ್ಯಕ್ಷತೆಯನ್ನು ಪ್ರತಿಷ್ಠಾನ ಅಧ್ಯಕ್ಷ ರತ್ನಾಕರ್ ಇಂದ್ರಾಳಿ ವಹಿಸಿದ್ದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ನಗರಸಭೆಯ ಸದಸ್ಯರಾದ ಮಂಜುನಾಥ್ ಮಣಿಪಾಲ್, ನಗರಸಭೆ ನಾಮ ನಿರ್ದೇಶಿತ ಸದಸ್ಯ ದೇವದಾಸ್ ಶೆಟ್ಟಿಗಾರ್ ಮುಖ್ಯ ಅತಿಥಿಗಳಾಗಿದ್ದರು.

ದ.ಕ.ಜಿಲ್ಲಾ ಪದ್ಮಶಾಲಿ ಮಹಾಸಭಾ ಅಧ್ಯಕ್ಷ ಜಯರಾಮ್ ಶೆಟ್ಟಿಗಾರ್, ದ.ಕ. ಜಿಲ್ಲಾ ಪದ್ಮಶಾಲಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಓಂಪ್ರಕಾಶ್ ಡಿ. ಶೆಟ್ಟಿಗಾರ್, ಕಲ್ಯಾಣಪುರ ಶ್ರೀಠಿಊಆದಿಶಕ್ತಿ ವೀರಭದ್ರ ಬ್ರಹ್ಮಲಿಂಗ ದೇವಸ್ಥಾನದ ಪ್ರಧಾನ ಮೊಕ್ತೇಸರರಾದ ಜ್ಯೋತಿಪ್ರಸಾದ್ ಶೆಟ್ಟಿಗಾರ್, ಪದ್ಮಶಾಲಿ ನೇಕಾರ ಪ್ರತಿಷ್ಠಾನ ಉಡುಪಿಯ ಉಪಾಧ್ಯಕ್ಷರಾದ ಸರೋಜ ಶೆಟ್ಟಿಗಾರ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News