×
Ad

ಉತ್ತರಪ್ರದೇಶ: ಟ್ರಕ್‌ಗೆ ಆಂಬ್ಯುಲೆನ್ಸ್ ಡಿಕ್ಕಿ , 7 ಮಂದಿ ಮೃತ್ಯು

Update: 2022-05-31 10:04 IST

ಲಕ್ನೊ: ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಇಂದು ಟ್ರಕ್‌ಗೆ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು NDTV ವರದಿ ಮಾಡಿದೆ.

ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಕೊಂಡ ನಂತರ ಆ್ಯಂಬುಲೆನ್ಸ್‌ನಲ್ಲಿ ದಿಲ್ಲಿಯಿಂದ ಹಿಂದಿರುಗುತ್ತಿದ್ದ ಪಿಲಿಭಿತ್‌ ಜಿಲ್ಲೆಯ ಕುಟುಂಬವೊಂದರ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದಿಲ್ಲಿ-ಲಖನೌ ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂಜಾನೆ ಈ ಅಪಘಾತ ಸಂಭವಿಸಿದೆ.

ಆ್ಯಂಬ್ಯುಲೆನ್ಸ್ ಮೊದಲು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಂತರ ಟ್ರಕ್‌ಗೆ ಡಿಕ್ಕಿ ಹೊಡೆಯಿತು. ಇದರ ಪರಿಣಾಮ ಚಾಲಕ ಹಾಗೂ  ವಾಹನದಲ್ಲಿದ್ದ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದರು.

ಮೃತಪಟ್ಟವರನ್ನು  ಗುರುತಿಸಲಾಗಿದ್ದು, ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ. ಅವರು ಬಂದ ನಂತರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಆದಿತ್ಯನಾಥ್ ಅವರು ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಅವರ ಕಚೇರಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News