ಬೆಂಗಳೂರು | ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ ಕುಸಿತ: ಇಬ್ಬರು ಕಾರ್ಮಿಕರು ಸಿಲುಕಿರುವ ಶಂಕೆ
Update: 2022-05-31 11:19 IST
ಬೆಂಗಳೂರು: ನಗರದ ಸೇಂಟ್ ಮಾರ್ಥಾಸ್ ಆಸ್ಪತ್ರೆಯ ಬಳಿ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ ಕುಸಿದು ಬಿದ್ದು ಕಾರ್ಮಿಕರು ಗಾಯಗೊಂಡಿದ್ದಾರೆ.
ಅವಶೇಷಗಳಡಿ ಇಬ್ಬರು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಗಾಯಗೊಂಡಿರುವ ಕಾರ್ಮಿಕರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಕಾರ್ಮಿಕರ ರಕ್ಷಣೆಗಾಗಿ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಸ್ಥಳಕ್ಕೆ ಕೇಂದ್ರ ವಿಭಾಗ ಪ್ರಭಾರ ಡಿಸಿಪಿ ಶರಣಪ್ಪ ಭೇಟಿ ನೀಡಿದ್ದಾರೆ.